ಬಳ್ಳಾರಿ: ಜಿಲ್ಲೆಯಲ್ಲಿಂದು ಹೊಸದಾಗಿ 298 ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿವೆ.
ಇಂದಿನ ಕೋವಿಡ್ ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 29,083 ಕ್ಕೆ ಏರಿಕೆಯಾಗಿದೆ.
ಈ ದಿನ ಕೊರೊನಾ ಸೋಂಕಿನಿಂದ ಸುಮಾರು 175 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇದುವರೆಗೆ ಒಟ್ಟು 23,707 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ ಕೊರೊನಾಗೆ ಎಂಟು ಮಂದಿ ಸಾವನ್ನಪ್ಪಿದ್ದು, ಈ ಮೂಲಕ ಸೋಂಕಿಗೆ 400 ಮೃತಪಟ್ಟಿದ್ದಾರೆ. ಇನ್ನು ಜಿಲ್ಲೆಯಲ್ಲಿ 4,976 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.