ಬಳ್ಳಾರಿ :ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿದ್ದ ಜಮೀನು ಪತ್ತೆ ಹಚ್ಚಿ ದಾಳಿ ನಡೆಸಿದ ಅಬಕಾರಿ ಅಧಿಕಾರಿಗಳು ಅಲ್ಲಿನ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.
ಬಳ್ಳಾರಿ ಉಪವಿಭಾಗದ ಅಬಕಾರಿ ಡಿವೈಎಸ್ಪಿ ಬಸಪ್ಪ ಪೂಜಾರ ನೇತೃತ್ವದಲ್ಲಿ ಅಬಕಾರಿ ಇಲಾಖೆ ತಂಡವು ಸಿರಗುಪ್ಪ ತಾಲೂಕಿನ ತೆಕ್ಕಲಕೋಟೆ ಸೀಮೆಯ ಶೇಖಣ್ಣ ಎಂಬುವವರ ಹೊಲದ ಮೇಲೆ ದಾಳಿ ನಡೆಸಿತ್ತು.
ಈ ವೇಳೆ 3.5 ಲಕ್ಷ ರೂ.ಮೌಲ್ಯದ 30 ಕೆಜಿ ಗಾಂಜಾ ಬೆಳೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಆರೋಪಿ ನಾಪತ್ತೆಯಾಗಿದ್ದಾನೆ. ಈ ಸಂಬಂಧ ಸಿರಗುಪ್ಪ ಅಬಕಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರ್ಯಾಚರಣೆಯಲ್ಲಿ ಅಬಕಾರಿ ಇನ್ಸಪೆಕ್ಟರ್ಗಳಾದ ಬಿ. ಅಂಜನೇಯ, ಪ್ರಹ್ಲಾದ ಆಚಾರ್ಯ, ಉಪನಿರೀಕ್ಷಕ ಶಂಕರ ಗುಡದಾರ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.