ETV Bharat / state

ಬಳ್ಳಾರಿಯಲ್ಲಿ ಮತ್ತೆ ಮೂವರಲ್ಲಿ ಕೊರೊನಾ ದೃಢ: ಸೋಂಕಿತರ ಸಂಖ್ಯೆ 33ಕ್ಕೆ ಏರಿಕೆ

ಮುಂಬೈ, ದೆಹಲಿಯಿಂದ ಬಳ್ಳಾರಿಗೆ ಆಗಮಿಸಿದ್ದ ಜಿಲ್ಲೆಯ ಬೇರೆ ಬೇರೆ ಗ್ರಾಮಗಳ ವಲಸೆ ಕಾರ್ಮಿಕರನ್ನು ಬಳ್ಳಾರಿ ನಗರ ಹೊರವಲಯದ ಅಲ್ಲೀಪುರ ವಸತಿ ನಿಲಯದಲ್ಲಿ ಕ್ವಾರಂಟೈನ್ ಮಾಡಲಾಗಿದ್ದು, ಇಂದು ಮೂವರಲ್ಲಿ ಸೋಂಕು ಇರುವುದು ದೃಢಪಟ್ಟಿದೆ.

3 new corona case in ballary
ಬಳ್ಳಾರಿಯಲ್ಲಿ ಮತ್ತೆ ಮೂವರಲ್ಲಿ ಕೊರೊನಾ ಸೋಂಕು ದೃಢ: ಸೋಂಕಿತರ ಸಂಖ್ಯೆ 33ಕ್ಕೆ ಏರಿಕೆ
author img

By

Published : May 23, 2020, 4:52 PM IST

ಬಳ್ಳಾರಿ: ಗಣಿನಾಡಿನಲ್ಲಿಂದು ಮೂರು ಕೊರೊನಾ ಪಾಸಿಟಿವ್ ಕೇಸ್​ಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 33ಕ್ಕೆ ಏರಿಕೆಯಾಗಿದೆ.

ಹೊರ ರಾಜ್ಯಗಳಿಂದ ಬಂದವರನ್ನು ಬಳ್ಳಾರಿ ನಗರ ಹೊರವಲಯದ ಅಲ್ಲೀಪುರ ವಸತಿ ನಿಲಯದಲ್ಲಿ ಕ್ವಾರಂಟೈನ್ ಮಾಡಲಾಗಿದ್ದು, ಈ ಮೂವರ ಗಂಟಲು ದ್ರವವನ್ನ ಪರೀಕ್ಷೆಗೆ ಕಳುಹಿಸಲಾಗಿತ್ತು. ಇಂದು ಗಂಟಲು ದ್ರವ ಪರೀಕ್ಷೆಯ ವರದಿ ಬಂದಿದ್ದು, ಕೊರೊನಾ ಸೋಂಕು ಇರುವುದು ಖಾತ್ರಿಯಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.

ವಲಸೆ ಕಾರ್ಮಿಕರು ಅನುಭವಿಸುವ ಸಂಕಷ್ಟವನ್ನರಿತ ಕೇಂದ್ರ ಸರ್ಕಾರ ತಮ್ಮ ತಮ್ಮ ರಾಜ್ಯಗಳಿಗೆ ತೆರಳಲು ಅವಕಾಶ ಕಲ್ಪಿಸಿದೆ. ಈ ಹಿನ್ನೆಲೆಯಲ್ಲಿ ಮುಂಬೈ, ದೆಹಲಿಯಿಂದ ಬಳ್ಳಾರಿಗೆ ಆಗಮಿಸಿದ್ದ ಜಿಲ್ಲೆಯ ಬೇರೆ ಬೇರೆ ಗ್ರಾಮಗಳ ವಲಸೆ ಕಾರ್ಮಿಕರನ್ನು ಜಿಲ್ಲಾಡಳಿತದಿಂದ ಕ್ವಾರಂಟೈನ್ ಮಾಡಲಾಗಿತ್ತು. ಇದೀಗ ಮೂವರಲ್ಲಿ ಕೊರೊನಾ ಪತ್ತೆಯಾಗಿದ್ದು, ಅವರೆಲ್ಲರನ್ನೂ ಜಿಲ್ಲಾ ಕೋವಿಡ್ ಆಸ್ಪತ್ರೆಯ ಐಸೋಲೇಷನ್​ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದೀಗ ಸೋಂಕಿತರ ಸಂಖ್ಯೆ 33ಕ್ಕೆ ಏರಿಕೆಯಾಗಿದ್ದು, ಈವರೆಗೂ 15 ಮಂದಿ ಗುಣಮುಖರಾಗಿದ್ದಾರೆ. ಒಬ್ಬರು ಸಾವನ್ನಪ್ಪಿದ್ದಾರೆ. ಸದ್ಯ ಐಸೋಲೇಷನ್​​ನಲ್ಲಿರುವವರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.