ಬಳ್ಳಾರಿ: ನಾಳೆಯಿಂದ ದ್ವಿತಿಯ ಪಿಯುಸಿ ಪರೀಕ್ಷೆ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲಾ ಶಿಕ್ಷಣ ಇಲಾಖೆಯಿಂದ ಸಕಲ ಸಿದ್ದತೆ ನಡೆದಿದೆ. ಬಳ್ಳಾರಿ ಮತ್ತು ವಿಜಯನಗರ ಅವಳಿ ಜಿಲ್ಲೆಯಲ್ಲಿ ಒಟ್ಟು 34 ಪರೀಕ್ಷಾ ಕೇಂದ್ರಗಳನ್ನು ಸಿದ್ದಪಡಿಸಲಾಗಿದೆ. ಪರೀಕ್ಷಾ ಸಿದ್ದತೆ ಕುರಿತು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎನ್.ರಾಜು ಮಾಹಿತಿ ನೀಡಿದರು.
ಅವಳಿ ಜಿಲ್ಲೆಗಳ ಪೈಕಿ ಬಳ್ಳಾರಿಯಲ್ಲಿ 16 ಪರಿಕ್ಷಾ ಕೇಂದ್ರಗಳು ಹಾಗೂ ವಿಜಯನಗರ ಜಿಲ್ಲೆಯಲ್ಲಿ 18 ಕೇಂದ್ರಗಳನ್ನು ತೆರೆಯಲಾಗಿದೆ. ಎರಡೂ ಜಿಲ್ಲೆಯಿಂದ 30,647 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಅದರಲ್ಲಿ 26,087 ಪ್ರೆಶರ್, 1,376 ಖಾಸಗಿ, 3,184 ರಿಪೀಟರ್ಸ್ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಅವರು ತಿಳಿಸಿದರು.
ಒಟ್ಟು ವಿದ್ಯಾರ್ಥಿಗಳಲ್ಲಿ 15,971 ಬಾಲಕರು ಹಾಗೂ 14,676 ಬಾಲಕಿಯರು ಪರಿಕ್ಷೆಗೆ ಬರೆಯಲಿದ್ದಾರೆ. ಇದರಲ್ಲಿ ಕಲಾ ವಿಭಾಗ - 15,421, ವಾಣಿಜ್ಯ ವಿಭಾಗ - 7,634, ವಿಜ್ಞಾನ ವಿಭಾಗದಲ್ಲಿ 7,592 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತುಕೊಳ್ಳಲಿದ್ದಾರೆ. ಒಟ್ಟು ಆರು ತಂಡಗಳಲ್ಲಿ ಪರೀಕ್ಷಾ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.
ಯಾವುದೇ ಧರ್ಮದ ಸಂಕೇತದ ಉಡುಪುಗಳನ್ನು ಪರೀಕ್ಷಾ ಸಂದರ್ಭದಲ್ಲಿ ಧರಿಸುವಂತಿಲ್ಲ. ಕಾಲೇಜಿನ ನಿಗದಿಪಡಿಸಿದ ಸಮವಸ್ತ್ರವನ್ನು ಧರಿಸಿ ಬರುವಂತೆ ಸರ್ಕಾರದ ಆದೇಶವನ್ನು ಎಲ್ಲ ವಿದ್ಯಾರ್ಥಿಗಳು ಪಾಲಿಸಬೇಕೆಂದು ಸೂಚನೆ ನೀಡಿದರು.
ಇದನ್ನೂ ಓದಿ: ನಾಳೆಯಿಂದ ದ್ವಿತೀಯ ಪಿಯು ಪರೀಕ್ಷೆ: ಧರ್ಮ ಸೂಚಕ ವಸ್ತ್ರ ಧರಿಸಲು ಅವಕಾಶವಿಲ್ಲ