ಬಳ್ಳಾರಿ: ಇಂದು ಒಂದೇ ದಿನ ಹೊಸದಾಗಿ 333 ಕೊರೊನಾ ಪಾಸಿಟಿವ್ ಕೇಸ್ಗಳು ಪತ್ತೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 6307ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಇಂದು 333 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇಂದು ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿನ ಸೋಂಕಿತರ ಸಂಖ್ಯೆ 6307ಕ್ಕೆ ಏರಿಕೆಯಾಗಿದೆ.
208 ಮಂದಿ ಗುಣಮುಖರಾಗಿ ಜಿಲ್ಲಾ ಕೋವಿಡ್-19 ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಒಟ್ಟು 3008 ಮಂದಿ ಗುಣಮುಖರಾದಂತಾಗಿದೆ. ಜಿಲ್ಲೆಯಲ್ಲಿ ಇದುವರೆಗೆ 95 ಮಂದಿ ಸಾವನ್ನಪ್ಪಿದ್ದು, 3204 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.