ಬಳ್ಳಾರಿ: ಜಿಲ್ಲೆಯಲ್ಲಿಂದು ಹೊಸದಾಗಿ 338 ಕೊರೊನಾ ಪಾಸಿಟಿವ್ ಕೇಸ್ಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 5636ಕ್ಕೆ ಏರಿಕೆಯಾಗಿದೆ.
ಒಂದೇ ದಿನದಲ್ಲಿ ಜಿಲ್ಲೆಯಲ್ಲಿ 338 ಮಂದಿಗೆ ಈ ಮಹಾಮಾರಿ ಕೊರೊನಾ ಸೋಂಕು ದೃಢಪಟ್ಟಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ.
ಇಂದು 244 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಸುಮಾರು 2,463 ಮಂದಿ ಗುಣಮುಖರಾದಂತಾಗಿದೆ. 88 ಮಂದಿ ಸಾವನ್ನಪ್ಪಿದ್ದು, ಒಟ್ಟು 3085 ಸಕ್ರಿಯ ಪ್ರಕರಣಗಳಿವೆ.