ಬಳ್ಳಾರಿ: ಜಿಲ್ಲೆಯಲ್ಲಿಂದು ಹೊಸದಾಗಿ 346 ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿವೆ.
ಇಂದು ಕಂಡು ಬಂದಿರುವ ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 24,179 ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಇಂದು 652 ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೆ ಒಟ್ಟು 19,920 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿಂದು ಏಳು ಮಂದಿ ಸೋಂಕಿಗೆ ಬಲಿಯಾಗಿದ್ದು, ಒಟ್ಟು 301 ಮಂದಿ ಸಾವನ್ನಪ್ಪಿದ್ದಾರೆ. ಇನ್ನು ಜಿಲ್ಲೆಯಲ್ಲಿ 3,958 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.