ಬಳ್ಳಾರಿ: ಜಿಲ್ಲೆಯಲ್ಲಿ ಇಂದು ಹೊಸದಾಗಿ 366 ಕೊರೊನಾ ಪಾಸಿಟಿವ್ ಕೇಸ್ಗಳು ಪತ್ತೆಯಾಗಿವೆ. ಇಂದಿನ ಕೊರೊನಾ ಪ್ರಕರಣಗಳು ಸೇರಿದಂತೆ ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 26,152 ಕ್ಕೇರಿಕೆಯಾಗಿದೆ.
ಜಿಲ್ಲೆಯಲ್ಲಿ ಇಂದು ಸೋಂಕಿನಿಂದ 347 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ 21,388 ಮಂದಿ ಗುಣಮುಖರಾಗಿದ್ದಾರೆ.
ಕೊರೊನಾಗೆ ಇಂದು ಎಂಟು ಮಂದಿ ಬಲಿಯಾಗಿದ್ದು, ಇಲ್ಲಿಯವರೆಗೆ ಒಟ್ಟು 338 ಮಂದಿ ಸಾವನ್ನಪ್ಪಿದ್ದಾರೆ. ಇನ್ನು ಜಿಲ್ಲೆಯಲ್ಲಿ 4,492 ಸಕ್ರಿಯ ಪ್ರಕರಣಗಳಿವೆ.