ಬಳ್ಳಾರಿ: ಜಿಲ್ಲೆಯಲ್ಲಿಂದು ಹೊಸದಾಗಿ 396 ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿವೆ.
ಇಂದು ಕಂಡು ಬಂದಿರುವ ಪ್ರಕರಣಗಳು ಸೇರಿದಂತೆ ಇದುವರೆಗೆ ಪತ್ತೆಯಾದ ಕೊರೊನಾ ಸೋಂಕಿತರ ಸಂಖ್ಯೆ 23,833 ಕ್ಕೇರಿಕೆಯಾಗಿದೆ.
ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿಗೆ ಎಂಟು ಮಂದಿ ಸಾವನ್ನಪ್ಪಿದ್ದು, ಇದುವರೆಗೆ ಒಟ್ಟು 294 ಮಂದಿ ಮೃತಪಟ್ಟಿದ್ದಾರೆ.
ಈ ದಿನ ಸೋಂಕಿನಿಂದ ಸುಮಾರು 643 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೆ ಒಟ್ಟು 19,268 ಮಂದಿ ಗುಣಮುಖರಾದಂತಾಗಿದೆ. ಇನ್ನು ಜಿಲ್ಲೆಯಲ್ಲಿ 4271 ಸಕ್ರಿಯ ಪ್ರಕಗಳಿವೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.