ಹೊಸಪೇಟೆ: ನಗರದ ರೋಟರಿ ವೃತ್ತ, ರಾಮಾಟಾಕೀಸ್, ವಿಜಯನಗರ ವೃತ್ತ, ವಾಲ್ಮೀಕಿ ವೃತ್ತ ಸೇರಿದಂತೆ ನಗರದ ವಿವಿಧೆಡೆ ಕೋವಿಡ್ ನಿಯಮ ಮೀರಿ ಸುಮ್ಮನೆ ಓಡಾಡುತ್ತಿದ್ದ ವಾಹನ ಸವಾರರಿಗೆ ಪೊಲೀಸರು ಬಿಸಿ ಮುಟ್ಟಿಸಿದರು.
ಪ್ರತಿ ವಾಹನಗಳನ್ನು ತಪಾಸಣೆ ನಡೆಸಿ, ಸೂಕ್ತ ದಾಖಲೆ ಹೊಂದಿದವರಿಗೆ ಸಂಚಾರಕ್ಕೆ ಅನುವು ಮಾಡಿಕೊಟ್ಟು, ಅನಗತ್ಯವಾಗಿ ತಿರುಗಾಡುವವರ ವಾಹನಗಳನ್ನು ಜಪ್ತಿ ಮಾಡಿದರು.
ಬೆಳಗ್ಗೆ 6 ರಿಂದ 10ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಈ ಸಮಯದ ಹೊರತಾಗಿ ಓಡಾಟ ಕಂಡುಬಂದರೆ ಕ್ರಮ ಜರುಗಿಸಲಾಗುತ್ತಿದೆ.
ಇದನ್ನೂ ಓದಿ: ಮಕ್ಕಳ ಭವಿಷ್ಯಕ್ಕೆ ಬೆಳಕಾದ ಗುರು.. ವಿದ್ಯಾರ್ಥಿಗಳ ಹೆಸರಲ್ಲಿ ಬ್ಯಾಂಕ್ ಠೇವಣಿ ತೆರೆದ ಶಿಕ್ಷಕಿ