ಬಳ್ಳಾರಿ: ಜಿಲ್ಲೆಯಲ್ಲಿಂದು ಹೊಸದಾಗಿ 431 ಕೊರೊನಾ ಪಾಸಿಟಿವ್ ಕೇಸ್ಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 8592ಕ್ಕೇ ಏರಿಕೆಯಾಗಿದೆ.
ಬಳ್ಳಾರಿ ಜಿಲ್ಲೆಯಾದ್ಯಂತ ಇದೂವರೆಗೆ 4688 ಮಂದಿ ಕೊರೊನಾದಿಂದ ಗುಣಮುಖರಾಗಿದ್ದು, 103 ಮಂದಿ ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ 3801 ಸಕ್ರಿಯ ಪ್ರಕರಣಗಳು ದಾಖಲಾಗಿವೆ.
ಇಂದು ಇಬ್ಬರು ಕೊರೊನಾ ರೋಗಕ್ಕೆ ತುತ್ತಾಗಿದ್ದು, 429 ಮಂದಿ ಗುಣಮುಖರಾಗಿ ಜಿಲ್ಲಾ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.