ಬಳ್ಳಾರಿ: ಗಣಿಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ಸೋಂಕು ಪ್ರಕರಣಗಳು ದಿನೇ-ದಿನೆ ಉಲ್ಬಣಗೊಳ್ಳುತ್ತಿದ್ದು ಇಂದು ಒಂದೇ ದಿನ 461 ಕೋವಿಡ್ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದೆ. ಇದರಿಂದ ಸೋಂಕಿತರ ಸಂಖ್ಯೆ 12527 ಕ್ಕೆ ಏರಿಕೆಯಾಗಿದೆ.
ಅಷ್ಟೇ ಅಲ್ಲದೆ ಇಂದು 9 ಮಂದಿ ಸೋಂಕಿನಿಂದ ಪ್ರಾಣ ಕಳೆದುಕೊಂಡಿದ್ದು ಜಿಲ್ಲೆಯಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಇನ್ನೂ 440 ಸೋಂಕಿತರು ಇಂದು ಡಿಸ್ಚಾರ್ಜ್ ಆಗಿದ್ದಾರೆ.
ಈವರೆಗೆ ಒಟ್ಟು 7,078 ಮಂದಿ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಸದ್ಯ 5,310 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ಮುಂದುವರೆದಿದೆ ಎಂದು ಜಿಲ್ಲಾಧಿಕಾರಿ ಎಸ್. ಎಸ್. ನಕುಲ್ ತಿಳಿಸಿದ್ದಾರೆ.