ಬಳ್ಳಾರಿ: ಗಣಿನಾಡಿನಲ್ಲಿ ಇಂದು ಹೊಸದಾಗಿ 48 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 773ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಇಂದು ದೃಢಪಟ್ಟಿರುವ 48 ಪ್ರಕರಣಗಳಲ್ಲಿ 17 ಮಂದಿ ಜಿಂದಾಲ್ ಕಾರ್ಖಾನೆಯ ಸೋಂಕಿತರ ಪ್ರೈಮರಿ ಹಾಗೂ ಸೆಕೆಂಡರಿ ಕಾಂಟ್ಯಾಕ್ಟ್ ಹೊಂದಿರುವವರು ಎಂದು ಗುರುತಿಸಲಾಗಿದೆ.
ಕೇವಲ ಜಿಂದಾಲ್ ಸಮೂಹ ಸಂಸ್ಥೆಯ ಉಕ್ಕು ಕಾರ್ಖಾನೆಯಲ್ಲಿ ಸುಮಾರು 400 ಮಂದಿ ನೌಕರರಿಗೆ ಈ ಮಹಾಮಾರಿ ಕೊರೊನಾ ಸೋಂಕಿರೋದು ದೃಢಪಟ್ಟಿದೆ.
ಜಿಲ್ಲೆಯಲ್ಲಿ ಇದುವರೆಗೆ ಸೋಂಕಿನಿಂದ 313 ಮಂದಿ ಗುಣಮುಖರಾಗಿದ್ದು, 23 ಮಂದಿ ಸಾವನ್ನಪ್ಪಿದ್ದಾರೆ. 437 ಸಕ್ರಿಯ ಪ್ರಕರಣಗಳಿವೆ.