ಬಳ್ಳಾರಿ: ಜಿಲ್ಲೆಯಲ್ಲಿಂದು 50 ಕೊರೊನಾ ಪಾಸಿಟಿವ್ ಕೇಸ್ಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1168ಕ್ಕೆ ಏರಿಕೆಯಾಗಿದೆ.
ಈವರೆಗೆ ಅಂದಾಜು 450 ಮಂದಿ ಜಿಂದಾಲ್ ಸಮೂಹ ಸಂಸ್ಥೆಯ ಉಕ್ಕು ಕಾರ್ಖಾನೆ ನೌಕರರಿಗೆ ಈ ಮಹಾಮಾರಿ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದೆ.
ಸದ್ಯ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1168ಕ್ಕೇರಿಕೆಯಾಗಿದ್ದು, 524 ಮಂದಿ ಗುಣಮುಖರಾಗಿದ್ದಾರೆ. 34 ಮಂದಿ ಸಾವನ್ನಪ್ಪಿದ್ದಾರೆ. 610 ಸಕ್ರಿಯ ಪ್ರಕರಣಗಳಿವೆ.