ಹೊಸಪೇಟೆ (ವಿಜಯನಗರ): ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಶ್ರೀಕಂಠಾಪುರ ತಾಂಡದಲ್ಲಿ ಎರಡು ದಿನದಲ್ಲಿ ಆರು ಮಂದಿ ಮೃತಪಟ್ಟಿದ್ದು, ತಾಂಡಾ ನಿವಾಸಿಗಳಲ್ಲಿ ನಡುಕ ಹುಟ್ಟಿಸಿದೆ.
ಮೂವರು ಕೊರೊನಾದಿಂದ ಮೃತಪಟ್ಟರೆ, ಇನ್ನು ಮೂವರು ಇತರ ಕಾರಣಗಳಿಂದ ಕೊನೆಯುಸಿರೆಳೆದಿದ್ದಾರೆ. ಗ್ರಾಮಸ್ಥರು ತಾವೇ ಪಿಪಿಇ ಕಿಟ್ ಧರಿಸಿ ಮೃತರ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ.
ಇದನ್ನೂ ಓದಿ : ಬೆಂಗಳೂರಲ್ಲಿ 15,205 ಮಂದಿಗೆ ತಗುಲಿದ ಕೋವಿಡ್
ತಾಂಡದಲ್ಲಿ ಇದುವರೆಗೆ 35 ಕ್ಕೂ ಅಧಿಕ ಮಂದಿಗೆ ಕೋವಿಡ್ ಸೋಂಕು ತಗುಲಿದ್ದು, 50 ಜನರ ಸ್ಯಾಂಪಲ್ ಸಂಗ್ರಹಿಸಲಾಗಿದ್ದು, ವರದಿಗಾಗಿ ನಿರೀಕ್ಷಿಸಲಾಗುತ್ತಿದೆ.