ETV Bharat / state

ಬಳ್ಳಾರಿಯಲ್ಲಿಂದು 65 ಜನರಲ್ಲಿ ಕೋವಿಡ್​ ದೃಢ: ಸೋಂಕಿತರ ಸಂಖ್ಯೆ 1,619ಕ್ಕೆ ಏರಿಕೆ

ಬಳ್ಳಾರಿ ಜಿಲ್ಲೆಯಲ್ಲಿಂದು 65 ಜನರಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 1,619ಕ್ಕೆ ಏರಿಕೆಯಾಗಿದೆ. 1,063 ಮಂದಿ ಗುಣಮುಖರಾಗಿದ್ದು, 577 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ಮುಂದುವರೆದಿದೆ.

Ballary corona case
Ballary corona case
author img

By

Published : Jul 11, 2020, 9:00 PM IST

ಬಳ್ಳಾರಿ: ಗಣಿಜಿಲ್ಲೆಯಲ್ಲಿಂದು ಹೊಸ 65 ಕೊರೊನಾ ಪಾಸಿಟಿವ್ ಕೇಸ್​ಗಳು ಪತ್ತೆಯಾಗಿದ್ದು, ಕೊರೊನಾ ಸೋಂಕಿತರ ಸಂಖ್ಯೆ 1,619ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಇಂದು ಒಂದೇ ದಿನ 65 ಮಂದಿಗೆ ಈ ಮಹಾಮಾರಿ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಜಿಂದಾಲ್ ಸಮೂಹ ಸಂಸ್ಥೆಯ ಉಕ್ಕು ಕಾರ್ಖಾನೆಯ 510 ನೌಕರರಿಗೆ ಕೋವಿಡ್​-19 ಸೋಂಕು ತಗುಲಿರುವುದು ದೃಢಪಟ್ಟಿದೆ.

ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,619ಕ್ಕೆ ಏರಿಕೆಯಾಗಿದ್ದು, 1,063 ಮಂದಿ ಗುಣಮುಖರಾಗಿದ್ದಾರೆ. 42 ಮಂದಿ ಸಾವನ್ನಪ್ಪಿದ್ದಾರೆ. 577 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ಮುಂದುವರೆದಿದೆ.

ಇಂದು 287 ಮಂದಿ ಗುಣಮುಖರಾಗಿ ಜಿಲ್ಲಾ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಅಂದಾಜು 46 ಮಂದಿ ಹೋಂ ಐಸೋಲೇಷನ್​ನಲ್ಲಿದ್ದಾರೆ ಎಂದು ಜಿಲ್ಲಾಧಿಕಾರಿ ಎಸ್. ಎಸ್.ನಕುಲ್ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.