ಬಳ್ಳಾರಿ: ಜಿಲ್ಲೆಯಲ್ಲಿಂದು ಹೊಸದಾಗಿ 703 ಕೊರೊನಾ ಪಾಸಿಟಿವ್ ಕೇಸ್ಗಳು ಪತ್ತೆಯಾಗಿವೆ.
ಇಂದು ಜಿಲ್ಲೆಯಲ್ಲಿ 703 ಮಂದಿಗೆ ಮಹಾಮಾರಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 13,846ಕ್ಕೆ ಏರಿಕೆಯಾಗಿದ್ದು, ಇಂದು ಏಳು ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಇದುವರೆಗೆ ಜಿಲ್ಲೆಯಲ್ಲಿ ಸುಮಾರು 7,911 ಮಂದಿ ಗುಣಮುಖರಾಗಿದ್ದು, 154 ಮಂದಿ ಸಾವನ್ನಪ್ಪಿದ್ದಾರೆ. 5781 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.