ಬಳ್ಳಾರಿ: ನಗರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿ ಆವರಣದಲ್ಲಿ, ಗವಿಯಪ್ಪ ವೃತ್ತದಲ್ಲಿ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಭವನದಲ್ಲಿ, ಬುಡಾ ಕಚೇರಿಯಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.
ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಕೆ.ರಾಮಲಿಂಗಪ್ಪ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಇಲಾಖೆಯ ಅಧೀಕ್ಷಕ ವಿ.ಸಿ.ಗುರುರಾಜ್, ಸಿಬ್ಬಂದಿಗಳಾದ ವಿಜಯಕುಮಾರ್, ಟಿ.ಶಿವ, ಮಲ್ಲೇಶಪ್ಪ, ಶ್ರೀಧರ್ ಕವಾಲಿ, ವಿಜಯ್ ಲಮಾಣಿ, ಮಂಜುನಾಥ ಮಣಿಗಲ್, ಮಾಧ್ಯಮ ಪ್ರತಿನಿಧಿಗಳು ಇದ್ದರು.
ಗವಿಯಪ್ಪ ವೃತ್ತದಲ್ಲಿ 150 ಅಡಿ ಎತ್ತರದ ರಾಷ್ಟ್ರ ಧ್ವಜಾರೋಹಣ:
ನಗರದ ಹೆಚ್.ಆರ್.ಗವಿಯಪ್ಪ ವೃತ್ತದಲ್ಲಿರುವ 150 ಅಡಿ ಎತ್ತರದ ರಾಷ್ಟ್ರ ಧ್ವಜಾರೋಹಣವನ್ನು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್.ಆನಂದಸಿಂಗ್ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಸದ ವೈ.ದೇವೇಂದ್ರಪ್ಪ, ಶಾಸಕರಾದ ಸೋಮಶೇಖರರೆಡ್ಡಿ,ನಾಗೇಂದ್ರ, ಜಿಪಂ ಅಧ್ಯಕ್ಷೆ ಭಾರತಿ ತಿಮ್ಮಾರೆಡ್ಡಿ ಸೇರಿದಂತೆ ಮತ್ತಿತರರು ಇದ್ದರು.
ಜಿಲ್ಲಾ ಸರ್ಕಾರಿ ನೌಕರರ ಸಂಘದ ಭವನದಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆ
ಬಳ್ಳಾರಿ ಜಿಲ್ಲಾಧಿಕಾರಿಯ ಕಚೇರಿ ಆವರಣದಲ್ಲಿರುವ ಜಿಲ್ಲಾ ಸರ್ಕಾರಿ ನೌಕರರ ಸಂಘದ ಭವನದಲ್ಲಿ ಶನಿವಾರ ಬೆಳಗ್ಗೆ 74ನೇ ಸ್ವಾತಂತ್ರ್ಯೋತ್ಸವ ದಿನ ಆಚರಣೆ ಮಾಡಲಾಯಿತು. ಜಿಲ್ಲಾ ಸಂಘದ ಅಧ್ಯಕ್ಷರಾದ ಎಂ. ಶಿವಾಜಿರಾವ್ ಅವರು ಸಾಮಾಜಿಕ ಅಂತರ ಪಾಲಿಸಿ ಧ್ವಜಾರೋಹಣ ನೆರವೇರಿಸಿದರು. ಕೊರೊನಾಗೆ ಮೃತಪಟ್ಟ ನೌಕರರಿಗೆ 2 ನಿಮಿಷ ಮೌನಾಚರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಎಂ.ಟಿ.ಮಲ್ಲೇಶ್, ಉಪಾಧ್ಯಕ್ಷರಾದ ಆಸೀಪ್, ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಭಾಗವಹಿಸಿದರು.
ಬುಡಾ ಕಚೇರಿಯಲ್ಲಿ ಧ್ವಜಾರೋಹಣ
74ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಆವರಣದಲ್ಲಿ 74ನೇ ಸ್ವಾತಂತ್ರ್ಯದ ಧ್ವಜಾರೋಹಣವನ್ನು ಅಧ್ಯಕ್ಷ ದಮ್ಮೂರು ಶೇಖರ್ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ಈರಪ್ಪ ಬಿರಾದರ್, ಬುಡಾ ಇಂಜಿನಿಯರ್ ರವಿಶಂಕರ್ ಸೇರಿದಂತೆ ಬುಡಾ ಸಿಬ್ಬಂದಿ ವರ್ಗದವರು ಹಾಜರಿದ್ದರು.