ಬಳ್ಳಾರಿ: ತಾಲೂಕಿನ ಅಮರಾಪುರ ಗ್ರಾಮದಲ್ಲಿ ಮದುವೆ ಸಮಾರಂಭದಲ್ಲಿ ಭಾಗಿಯಾಗಿದ್ದ ನೆರೆಯ ಆಂಧ್ರ ಪ್ರದೇಶ ಗಡಿ ಭಾಗದ ವಧು-ವರ ಸೇರಿದಂತೆ ಎಂಟು ಮಂದಿಯನ್ನ ಜಿಲ್ಲಾಡಳಿತ ಕ್ವಾರಂಟೈನ್ ಮಾಡಿದೆ.
ಜಿಲ್ಲಾಡಳಿತದ ಪರವಾನಗಿ ಪಡೆಯದ ಕಾರಣ ನೆರೆಯ ಆಂಧ್ರ ಪ್ರದೇಶದ ಗಡಿ ಗ್ರಾಮದಿಂದ ವಧು-ವರ ಸೇರಿದಂತೆ ಎಂಟು ಮಂದಿ ತಾಲೂಕಿನ ಅಮರಾಪುರ ಗ್ರಾಮದಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಹಾಜರಾಗಿದ್ದರು.
ಖಚಿತ ಮಾಹಿತಿ ಪಡೆದ ಜಿಲ್ಲಾಡಳಿತ ತಂಡವೊಂದನ್ನು ಗ್ರಾಮಕ್ಕೆ ಕಳುಹಿಸಿ, ಕೂಡಲೇ ಆ ಎಂಟು ಮಂದಿಯನ್ನ ಗುರುತಿಸಿ 14 ದಿನಗಳ ಕಾಲ ಕ್ವಾರಂಟೈನ್ ಮಾಡಿದೆ. ಆ ಎಂಟು ಮಂದಿಯ ಗಂಟಲು ದ್ರವ ತೆಗೆದುಕೊಂಡು ಪರೀಕ್ಷೆಗೆ ಒಳಪಡಿಸಿದ್ದು, ಲ್ಯಾಬ್ ರಿಪೋರ್ಟ್ ಬರಬೇಕಿದೆ.