ಹೊಸಪೇಟೆ (ವಿಜಯನಗರ): ಹರಪನಹಳ್ಳಿ ತಾಲೂಕಿನ ಬಾಗಳಿ ಕೆರೆಯಲ್ಲಿ ಮುಳುಗಿ ಬಾಲಕನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ.
ಕಾರ್ತಿಕ್ (13) ಮೃತ ಬಾಲಕ. ಭಾನುವಾರದಂದು ಶಾಲೆಗೆ ರಜೆ ಇರುವ ಕಾರಣ ಕಾರ್ತಿಕ್ ನಾಲ್ವರು ಸ್ನೇಹಿತರೊಂದಿಗೆ ಬಾಗಳಿ ಕೆರೆಗೆ ಈಜಲು ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಓದಿ: ಬಾಗಲಕೋಟೆಯಲ್ಲಿ ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ
ಮೃತ ಬಾಲಕನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.