ಹೊಸಪೇಟೆ: ನಗರದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಾಣಿಕೆ ಮಾಡುತ್ತಿದ್ದ ವೇಳೆ ಗ್ರಾಮೀಣ ಠಾಣೆ ಪೊಲೀಸರು ದಾಳಿ ನಡೆಸಿ ಓರ್ವನನ್ನು ಬಂಧಿಸಿದ್ದಾರೆ.
ಸಿರಸನಕಲ್ಲು ಪ್ರದೇಶದ ಹೆಚ್ಎಲ್ಸಿ ಕಾಲುವೆ ರಸ್ತೆಯಲ್ಲಿ ಅಕ್ರಮವಾಗಿ ಪಡಿತರವನ್ನು ಸಾಗಾಣಿಕೆ ಮಾಡುತ್ತಿದ್ದ ನಗರದ ನಿವಾಸಿ ಯುಸೂಫ್ ಎಂಬುವರನ್ನು ಪೊಲೀಸರು ಬಂಧಿಸಿದ್ದು, 8.28 ಕ್ವಿಂಟಾಲ್ ಅಕ್ಕಿ ಜೊತೆಗೆ ಗೂಡ್ಸ್ ವಾಹನವನ್ನು ವಶಕ್ಕೆ ಪಡೆದಿದ್ದಾರೆ.
ದಾಳಿಯಲ್ಲಿ ಆಹಾರ ಇಲಾಖೆ ಶಿರಸ್ತೇದಾರ್ ನಾಗರಾಜ್ ಹೆಚ್., ಗ್ರಾಮೀಣ ಪೊಲೀಸ್ ಠಾಣೆ ಪಿಎಸ್ಐ ಬಸವರಾಜ ಹಾಗೂ ಸಿಬ್ಬಂದಿ ಭಾಗಿಯಾಗಿದ್ದರು.