ETV Bharat / state

ಕೋವಿಡ್​ ಪರೀಕ್ಷೆ ಮಾಡಿಸಿಕೊಳ್ಳಲು ಬಂದಿದ್ದ ವ್ಯಕ್ತಿ ಕುಸಿದು ಬಿದ್ದು ಸಾವು - bellary covid news

ಕಂಟೇನ್​ಮೆಂಟ್ ಪ್ರದೇಶ ವ್ಯಾಪ್ತಿಯಲ್ಲಿ ನೆಲೆಸಿರುವ 58 ವರ್ಷದ ವ್ಯಕ್ತಿ ನೆಗಡಿ, ಶೀತ, ಜ್ವರ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ. ಈತ ಸಾವಿಗೀಡಾದ ನಂತರ ಪರೀಕ್ಷೆಗೆ ಒಳಪಡಿಸಲಾಗಿದ್ದು, ಕೊರೊನಾ ಇದ್ದದ್ದು ದೃಢವಾಗಿದೆ.

A man dies who came for COVID test
ಕೋವಿಡ್​ ಪರೀಕ್ಷೆ ಮಾಡಿಸಿಕೊಳ್ಳಲು ಬಂದಿದ್ದ ವ್ಯಕ್ತಿ ಸಾವು
author img

By

Published : Jul 23, 2020, 8:24 AM IST

ಬಳ್ಳಾರಿ: ಜಿಲ್ಲೆಯ ತೋರಣಗಲ್ಲಿನ ಜಿಂದಾಲ್ ಒಪಿಜೆ ಸೆಂಟರ್​ನಲ್ಲಿರುವ ಫೀವರ್ ಕ್ಲಿನಿಕ್​ನಲ್ಲಿ ಕೋವಿಡ್ ಪರೀಕ್ಷೆಗೆ ಸರತಿ ಸಾಲಿನಲ್ಲಿ ನಿಂತಿದ್ದ ವ್ಯಕ್ತಿ ಸ್ಥಳದಲ್ಲೇ ಕುಸಿದುಬಿದ್ದು ಸಾವಿಗೀಡಾಗಿದ್ದಾನೆ.

ಕಂಟೇನ್​ಮೆಂಟ್ ಪ್ರದೇಶ ವ್ಯಾಪ್ತಿಯಲ್ಲಿ ನೆಲೆಸಿರುವ 58 ವರ್ಷದ ವ್ಯಕ್ತಿ ನೆಗಡಿ, ಶೀತ, ಜ್ವರ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ. ಹೀಗಾಗಿ, ಫೀವರ್ ಕ್ಲಿನಿಕ್​​​​ಗೆ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಲು ಬಂದಿದ್ದ ಎನ್ನಲಾಗಿದೆ.

ಸಾವಿಗೀಡಾದ ನಂತರ ವ್ಯಕ್ತಿಯನ್ನು ಪರೀಕ್ಷೆ ಮಾಡಲಾಗಿದ್ದು, ಈತನಿಗೆ ಕೊರೊನಾ ಪಾಸಿಟಿವ್​ ಇತ್ತು ಎಂಬುದು ತಿಳಿದು ಬಂದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.