ಬಳ್ಳಾರಿ: ನಗರದ ರೈಲು ನಿಲ್ದಾಣ ರಸ್ತೆಯಲ್ಲಿ ವ್ಯಕ್ತಿಯೊಬ್ಬರು ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸೋಮವಾರ ಸಂಜೆ ನಡೆದಿದೆ. ನಾಲಗಡ್ಡೆದ ನಿವಾಸಿ ಮಹಮ್ಮದ್ ಉಸ್ಮಾನ್ ಬಾಷ (50) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಎಂದು ತಿಳಿದುಬಂದಿದೆ.
ಮಹಮ್ಮದ್ ಉಸ್ಮಾನ್ ಬಾಷ ಕೌಟುಂಬಿಕ ಸಮಸ್ಯೆಯಿಂದ ಮನನೊಂದು ಈ ರೀತಿ ಮಾಡಿಕೊಂಡಿದ್ದಾರೆ ಎನ್ನಲಾಗ್ತಿದೆ. ಪಕ್ಕದ ಬಂಕ್ನಿಂದ ಪೆಟ್ರೋಲ್ ತಂದು ಮೈಮೇಲೆ ಸುರಿದು ಬೆಂಕಿ ಹಚ್ಚಿಕೊಂಡ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಕ್ಷಣಾರ್ಧದಲ್ಲಿ ಅರ್ಧಕ್ಕಿಂತ ಹೆಚ್ಚು ದೇಹ ಸುಟ್ಟಹೋಗಿದೆ. ಈ ವೇಳೆ ತಕ್ಷಣ ಆತನನ್ನು ಆಸ್ಪತ್ರೆಗೆ ಸಾಗಿಸುವ ಬದಲಾಗಿ ಮೊಬೈಲ್‌ಗಳಲ್ಲಿ ಈ ದೃಶ್ಯವನ್ನು ಚಿತ್ರಿಕರಿಸಿಕೊಂಡಿದ್ದಾರೆ. ಬಳಿಕ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಈ ಕುರಿತು ಬ್ರೂಸ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಓದಿ: ಕೌಟುಂಬಿಕ ಕಲಹ : ವಿಜಯಪುರದಲ್ಲಿ ಕೆನಾಲ್ಗೆ ಹಾರಿ ಕೆಎಸ್ಆರ್ಟಿಸಿ ನೌಕರ ಆತ್ಮಹತ್ಯೆ