ಹೊಸಪೇಟೆ: ಖಾಸಗಿ ಕಂಪನಿಯ ಉದ್ಯೋಗಿಯೊಬ್ಬ ಲೈವ್ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮಹೇಶ್ (40) ಎಂಬ ಉದ್ಯೋಗಿ ಬ್ಯಾಂಕ್ನಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈತ ನಗರದ ಶ್ರೀರಾಮುಲು ಉದ್ಯಾನವನದ ಬಳಿ ಇರುವ ಖಾಸಗಿ ಕಂಪೆನಿಯ ಸಿಬ್ಬಂದಿ ಎಂದು ಹೇಳಲಾಗುತ್ತಿದೆ. ಮೇಲಾಧಿಕಾರಿಗಳ ಕಿರುಕುಳ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.
ಬ್ಯಾಂಕ್ನಲ್ಲಿ ಲೀಗಲ್ ಅಡ್ವೈಸರ್ ಆಗಿ ಕೆಲಸ ಮಾಡುತ್ತಿದ್ದ ಮಹೇಶ್ಗೆ ಸರಿಯಾದ ದಾಖಲೆಗಳು ಇಲ್ಲದ್ದಿದ್ದರೂ ಗ್ರಾಹಕರಿಗೆ ಲೋನ್ ನೀಡುವಂತೆ ಒತ್ತಡ ಹೇರಲಾಗಿತ್ತಂತೆ. ಲಾಕ್ಡೌನ್ ಹಿನ್ನೆಲೆಯಲ್ಲಿ ಬ್ಯುಸಿನೆಸ್ ಇಲ್ಲದ ಕಾರಣ ಕೆಲಸಗಾರರ ಮೇಲೆ ಒತ್ತಡದ ತಂತ್ರ ಬ್ಯಾಂಕ್ ಹೇರಿದೆ ಎಂಬ ಆರೋಪ ಕೇಳಿ ಬಂದಿದೆ.