ಬಳ್ಳಾರಿ : ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹುರುಳಿ ಹಾಳ್ ಮ್ಯಾಸರಹಟ್ಟಿಯ ಗರ್ಭಿಣಿಯೊಬ್ಬರಿಗೆ 108 ಆ್ಯಂಬುಲೆನ್ಸ್ ಸಿಬ್ಬಂದಿಯೇ ಸುರಕ್ಷಿತ ಹೆರಿಗೆ ಮಾಡಿಸಿದ್ದಾರೆ.
ಮ್ಯಾಸರಹಟ್ಟಿಯ 25 ವರ್ಷದ ರೂಪಾ ಎಂಬ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆ, ಶಸ್ತ್ರಚಿಕಿತ್ಸೆಗೆಂದು ಚಿಕ್ಕಜೋಗಿಹಳ್ಳಿಯ ಸಮುದಾಯ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್ನಲ್ಲಿ ಕರೆ ತರಲಾಗ್ತಿತ್ತು. ಈ ವೇಳೆ ಮಾರ್ಗಮಧ್ಯೆ ಅತೀವ ನೋವು ಕಾಣಿಸಿಕೊಂಡಿದ್ದರಿಂದ ಆ್ಯಂಬ್ಯುಲೆನ್ಸ್ ಸಿಬ್ಬಂದಿಯೇ ವಾಹನದಲ್ಲೇ ಸುರಕ್ಷಿತ ಹೆರಿಗೆ ಮಾಡಿಸಿದ್ದಾರೆ. ಸದ್ಯ ತಾಯಿ -ಮಗು ಆರೋಗ್ಯವಾಗಿದ್ದಾರೆ.
ಶಸ್ತ್ರ ಚಿಕಿತ್ಸೆಯಾಗಬೇಕಿದ್ದ ಮಹಿಳೆಗೆ ಮಾರ್ಗ ಮಧ್ಯೆ ಹೆರಿಗೆ
ಗರ್ಭಿಣಿಗೆ ರಕ್ತದೊತ್ತಡ ಹೆಚ್ಚಾಗಿದ್ದರಿಂದ ಸುರಕ್ಷಿತ ಹೆರಿಗೆಗೆ ಶಸ್ತ್ರಚಿಕಿತ್ಸೆ ಮಾಡಲು ಜಗಳೂರು ತಾಲೂಕು ಆಸ್ಪತ್ರೆಗೆ ಕರೆದೊಯ್ಯುವಂತೆ ವೈದ್ಯರು ಸೂಚಿಸಿದ್ದರು. ಹೀಗಾಗಿ, 108 ಆ್ಯಂಬ್ಯುಲೆನ್ಸ್ನಲ್ಲಿ ಕರೆದುಕೊಂಡು ಹೋಗಲಾಗ್ತಿತ್ತು. ಈ ವೇಳೆ ಮಾರ್ಗ ಮಧ್ಯೆ ಹೆರಿಗೆ ನೋವು ಹೆಚ್ಚಾಗಿದ್ದರಿಂದ ಆರೋಗ್ಯ ಸಹಾಯಕಿ ಜ್ಯೋತಿ ಸುರಕ್ಷಿತವಾಗಿ ಹೆರಿಗೆ ಮಾಡಿಸಿದ್ದಾರೆ. ರೂಪಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಆ್ಯಂಬುಲೆನ್ಸ್ ಚಾಲಕ ಖಾಜಾ ಸಾಬ್ ತಾಯಿ ಮಗುವನ್ನು ಚಿಕ್ಕಜೋಗಿಹಳ್ಳಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದಾರೆ.