ಬಳ್ಳಾರಿ: ಬೈಕ್ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಯುವಕ ಸ್ಥಳದಲ್ಲಿಯೇ ಸಾವನ್ನಪಿರುವ ಘಟನೆ ಗಣಿನಾಡು ಬಳ್ಳಾರಿಯಲ್ಲಿ ನಡೆದಿದೆ.
ಬಳ್ಳಾರಿ ಜಿಲ್ಲೆಯ ಕುಡುತಿನಿ ತಾಲೂಕಿನ ಕೆಪಿಟಿಸಿಎಲ್ ಮತ್ತು ತೋರಣಗಲ್ಲು ಮಾರ್ಗ ಮಧ್ಯದಲ್ಲಿ ಬೈಕ್ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕುರುಗೋಡು ತಾಲೂಕಿನ ಬಾದನಹಟ್ಟಿ ಗ್ರಾಮದ ಶರ್ಮ್ಸ್ವಲಿ (30) ಎಂದು ಗುರುತಿಸಲಾಗಿದೆ.

ಕುಡುತಿನ ಹತ್ತಿರದ ಸುಲ್ತಾನ್ಪುರ ಗ್ರಾಮದಲ್ಲಿ ಕಾರ್ಪೆಂಟರ್ ಕೆಲಸ ಮಾಡುತ್ತಿದ್ದ ಶರ್ಮ್ಸ್ವಲಿ, ಕೆಲಸಕ್ಕೆ ಬೇಕಾದ ಸಾಮಾಗ್ರಿ ತರಲು ತೋರಣಗಲ್ಲು ಪ್ರದೇಶಕ್ಕೆ ಬೈಕ್ನಲ್ಲಿ ತೆರಳಿದ್ದಾನೆ. ಈ ವೇಳೆ ಬೈಕೆಗೆ ಹಿಂದಿನಿಂದ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ತಲೆಗೆ ಬಲವಾದ ಪೆಟ್ಟು ಬಿದ್ದಿದ್ದು, ಶರ್ಮ್ಸ್ವಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಈ ಘಟನೆ ಕುರಿತು ಕುಡುತಿನಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.