ಬಳ್ಳಾರಿ: ಸಿಡಿಲು ಬಡಿದು ಯುವಕನೋರ್ವ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕುರುಗೋಡು ತಾಲೂಕಿನ ಸಿದ್ಧಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಶಿವಕುಮಾರ (30) ಮೃತ ಯುವಕ. ಶಿವಕುಮಾರ ಹೊಲದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಸಾವನ್ನಪ್ಪಿದ್ದಾನೆ ಎಂದು ಕುರುಗೋಡು ತಹಸೀಲ್ದಾರ್ ತಿಳಿಸಿದ್ದಾರೆ. ಮಗನನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ.