ಬಳ್ಳಾರಿ: ಲಾರಿಯೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಕೊಟ್ಟೂರು ತಾಲೂಕಿನ ಉಜ್ಜಿನಿಯಲ್ಲಿ ಇಂದು ನಡೆದಿದೆ.
ಉಜ್ಜಿನಿ ಗ್ರಾಮದ ಅನಂದಪ್ಪ(45) ಮೃತ ವ್ಯಕ್ತಿ. ಕೊಟ್ಟೂರು ಕಡೆಯಿಂದ ಜಗಳೂರು ಕಡೆ ಹೊರಟಿದ್ದ ಲಾರಿ, ಟಿವಿಎಸ್ ಬೈಕ್ನಲ್ಲಿ ಮನೆಗೆ ತರಳುತ್ತಿದ್ದ ವೇಳೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರ ತೀವ್ರ ಗಾಯಗೊಂಡಿದ್ದ. ಚಿಕಿತ್ಸೆಗಾಗಿ ಸ್ಥಳೀಯ ಅಸ್ಪತ್ರೆಗೆ ದಾಖಲಿಸಿದಾಗ ವ್ಯಕ್ತಿ ಮೃತಪಟ್ಟಿರುವುದಾಗಿ ವೈದ್ಯರು ಖಚಿತಪಡಿಸಿದ್ದಾರೆ ಎನ್ನಲಾಗಿದೆ.
ಅಪಘಾತಕ್ಕೆ ಲಾರಿ ಚಾಲಕನ ಅತಿಯಾದ ವೇಗ ಹಾಗೂ ಅಜಾಗರೂಕತೆ ಕಾರಣ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸ್ಥಳಕ್ಕೆ ಕೊಟ್ಟೂರು ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.