ಬಳ್ಳಾರಿ: ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯಗಳಾದ ಘಟನೆ ಕೂಡ್ಲಿಗಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 50ರ ಬಣವಿಕಲ್ಲು ಡಾಬಾ ಬಳಿ ನಡೆದಿದೆ.
ವೆಂಕಟೇಶ ಕುಲಕರ್ಣಿ (53) ಮೃತರು. ಶೃತಿ ಕುಲಕರ್ಣಿ (27) ಹಾಗೂ ಸುಗುಣ (50) ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಕೂಡ್ಲಿಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಕೂಡ್ಲಿಗಿ ತಾಲೂಕಿನ ಹೊಸಹಳ್ಳಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.