ಹೊಸಪೇಟೆ: ವಿಶ್ವವಿಖ್ಯಾತ ಹಂಪಿಗೆ ಬಹುಭಾಷಾ ನಟ ಶ್ರೀಕಾಂತ್ ಭೇಟಿ ನೀಡಿದ್ದು, ಈ ವೇಳೆ ಅವರು ವಿರೂಪಾಕ್ಷೇಶ್ವರನ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು. ದೇವಸ್ಥಾನದ ಅರ್ಚಕರು ನಟನನ್ನು ಗೌರವಿಸಿದರು.
ಶ್ರೀಕಾಂತ್ ದೇವಸ್ಥಾನದ ಎಡಭಾಗದಲ್ಲಿರುವ ಪಂಪಾಂಬಿಕೆ ಹಾಗೂ ಭುವನೇಶ್ವರಿ ದೇವಿಯ ದರ್ಶನ ಪಡೆದರು. ನಂತರ ಕಡಲೆಕಾಳು ಹಾಗೂ ಸಾಸುವೆಕಾಳು ಗಣೇಶ, ಉಗ್ರನರಸಿಂಹ, ಮಹಾನವಮಿ ದಿಬ್ಬ, ರಾಣಿಸ್ನಾನ ಗೃಹ ಸೇರಿದಂತೆ ಇನ್ನಿತರ ಸ್ಮಾರಕಗಳನ್ನು ಕಣ್ತುಂಬಿಕೊಂಡರು.