ETV Bharat / state

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆನ್​ಲೈನ್​ ಮೂಲಕ ಪೋಸ್ಟರ್​ ಕಳಿಸಿ​​​ ಪ್ರತಿಭಟನೆ!

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ AIDSO ವಿದ್ಯಾರ್ಥಿ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

AIDSO Student Organization Protest
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ AIDSO ವಿದ್ಯಾರ್ಥಿ ಸಂಘಟನೆಯಿಂದ ಆನ್​ಲೈನ್​ ಪ್ರತಿಭಟನೆ
author img

By

Published : Jul 18, 2020, 12:12 PM IST

ಬಳ್ಳಾರಿ: AIDSO ವಿದ್ಯಾರ್ಥಿ ಸಂಘಟನೆ ವತಿಯಿಂದ ಅಖಿಲ ಕರ್ನಾಟಕ ಪ್ರತಿಭಟನೆಗೆ ಕರೆ ನೀಡಲಾಗಿತ್ತು. ಅದರಂತೆ ರಾಜ್ಯದ ಸಾವಿರಾರೂ ಪದವಿ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್ ವಿದ್ಯಾರ್ಥಿಗಳು ಆನ್​ಲೈನ್​ನಲ್ಲಿ ಪೋಸ್ಟರ್ ಹಾಕುವ ಮೂಲಕ ಪ್ರತಿಭಟನೆ ನಡೆಸಿದ್ದಾರೆ.

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ AIDSO ವಿದ್ಯಾರ್ಥಿ ಸಂಘಟನೆಯಿಂದ ಆನ್​ಲೈನ್​ ಪ್ರತಿಭಟನೆ
ಬೇಡಿಕೆಗಳು:
  • ರಾಜ್ಯ ಸರ್ಕಾರ CET ಪರೀಕ್ಷೆ ಮುಂದೂಡಬೇಕು.
  • ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳ ಪದವಿ, ಸ್ನಾತಕೋತ್ತರ ಹಾಗೂ ಎಂಜಿನಿಯರಿಂಗ್ ಅಂತಿಮ ವರ್ಷದ ವಿದ್ಯಾರ್ಥಿಗಳ ಪರೀಕ್ಷೆಗಳನ್ನು ರದ್ದುಗೊಳಿಸಬೇಕು.
  • ಪರೀಕ್ಷಾ ಶುಲ್ಕವನ್ನು ವಿದ್ಯಾರ್ಥಿಗಳಿಗೆ ಹಿಂದಿರುಗಿಸಬೇಕು.
    AIDSO Student Organization Protest
    ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ AIDSO ವಿದ್ಯಾರ್ಥಿ ಸಂಘಟನೆಯಿಂದ ಆನ್​ಲೈನ್​ ಪ್ರತಿಭಟನೆ
    AIDSO Student Organization Protest
    ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ AIDSO ವಿದ್ಯಾರ್ಥಿ ಸಂಘಟನೆಯಿಂದ ಆನ್​ಲೈನ್​ ಪ್ರತಿಭಟನೆ

ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾವಿರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಆನ್​ಲೈನ್ ಚಳುವಳಿಯಲ್ಲಿ ಭಾಗವಹಿಸಿದ್ದಾರೆ. ಮುಖ್ಯಮಂತ್ರಿಗಳು, ಉನ್ನತ ಶಿಕ್ಷಣ ಸಚಿವರು, ವಿಶ್ವವಿದ್ಯಾಲಯಗಳ ಕುಲಪತಿಗಳು, ಕುಲಸಚಿವರಿಗೆ ಟ್ವಿಟರ್, ಇನ್‌ಸ್ಟಾಗ್ರಾಂ, ಇ-ಮೇಲ್, ಫೇಸ್​​ಬುಕ್ ಮೂಲಕ ಆಗ್ರಹಿಸಿದ್ದಾರೆ. ಅಲ್ಲದೆ ಬಳ್ಳಾರಿ ವಿ.ಎಸ್.ಕೆ ವಿಶ್ವವಿದ್ಯಾಲಯದ ಕುಲಪತಿಗೆ ಪ್ರಾಂಶುಪಾಲರ ಮೂಲಕ ಮನವಿ ಪತ್ರಗಳನ್ನು ಕಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.