ಬಳ್ಳಾರಿ: ಉದ್ಯೋಗ ಖಾತ್ರಿ ಯೋಜನೆಯಲ್ಲಿ ಮಹಿಳೆಯರಿಗೆ 200 ದಿನಗಳ ಕೂಲಿ ಕೆಲಸ ಮತ್ತು ಪ್ರತಿನಿತ್ಯ 600 ರೂ. ಕೂಲಿ ನೀಡಬೇಕೆಂದು ಆಗ್ರಹಿಸಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿ ಜಮಾಯಿಸಿದ ರೈತ ಮಹಿಳೆಯರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು. ಈ ವೇಳೆ ಅಖಿಲ ಭಾರತ ಜನವಾದಿ ಮಹಿಳಾ ಸಂಘನೆಯ ಜಿಲ್ಲಾ ಕಾರ್ಯದರ್ಶಿ ಜೆ. ಸರೋಜ ಮಾತನಾಡಿ, ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ 200 ದಿನದ ಕೆಲಸ ಹಾಗೂ ದಿನಕ್ಕೆ 600 ರೂ. ವೇತನ ನೀಡಬೇಕು ಎಂದು ಆಗ್ರಹಿಸಿದರು.
ಬೇಡಿಕೆಗಳು:-
1. ಕೃಷಿಯಲ್ಲಿ ದುಡಿಯುವ ಮಹಿಳೆಯರನ್ನು ರೈತರೆಂದು ಗುರುತಿಸಬೇಕು.
2. ಜನ ವಿರೋಧಿ ಕೃಷಿ ಕಾಯ್ದೆ, ಅಗತ್ಯ ವಸ್ತುಗಳ ತಿದ್ದುಪಡಿ ಕಾಯ್ದೆ , ಕಾರ್ಮಿಕ ಸಂಹಿತೆಯನ್ನು ಹಿಂತೆಗೆದುಕೊಳ್ಳಬೇಕು.
3. ರಾಜ್ಯ ಸರ್ಕಾರ ಭೂಸುಧಾರಣಾ ಕಾಯ್ದೆ ಮತ್ತು ಗೋಹತ್ಯೆ ಕಾಯ್ದೆಯನ್ನು ಹಿಂಪಡೆಯಬೇಕು.
4. ಕೋವಿಡ್ ಸಮಯದಲ್ಲಿ ಮಾತೃಶ್ರೀ ಯೋಜನೆ ಮುಂದುವರೆಸಬೇಕು.
5. ಉದ್ಯೋಗ ಖಾತ್ರಿ ಯೋಜನೆಯಲ್ಲಿ ಸಮರ್ಪಕ ಜಾರಿ ಮೂಲಕ 200 ದಿನಗಳ ಕೆಲಸ ಹಾಗೂ 600 ರೂ ಕೂಲಿ ನೀಡಬೇಕು.
6. ನಿಲುಗಡೆಯಾಗಿರುವ ಅಂಗವಿಕಲರ, ವಿಧವಾ, ವೃದ್ಧಾಪ್ಯ, ಸಂಧ್ಯಾ ಸುರಕ್ಷಾ ವೇತನವನ್ನು ನೀಡಬೇಕು ಎಂದು ಆಗ್ರಹಿಸಿದರು.