ಹೊಸಪೇಟೆ: ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಹೆಚ್ಚಿನ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ವಿಜಯವನ್ನು ಸಾಧಿಸಿದ್ದಾರೆ. ಗಾಂಧೀಜಿ ಹಾಗೂ ಪ್ರಧಾನಿ ಅವರ ಗ್ರಾಮ ಸ್ವರಾಜ್ಯ ಕನಸು ನನಸಾಗಲಿದೆ ಎಂದು ಸಚಿವ ಬಿ. ಶ್ರೀರಾಮುಲು ಹೇಳಿದರು.
ತಾಲೂಕಿನ ಹಂಪಿಯಲ್ಲಿ ತೆಪ್ಪೋತ್ಸವ ಹಾಗೂ ತುಂಗಭದ್ರಾ ಆರತಿ ಕಾರ್ಯಕ್ರಮದ ಬಳಿಕ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ವಿಶೇಷವಾಗಿ ಕಾಶಿಯಲ್ಲಿ ಆರತಿ ಕಾರ್ಯಕ್ರಮವಾಗುತ್ತದೆ. ಹಾಗಾಗಿ ಈ ಭಾಗದಲ್ಲಿ ತುಂಗಭದ್ರಾ ಆರತಿ ಕಾರ್ಯಕ್ರಮವನ್ನು ನೆರವೇರಿಸಲಾಗುತ್ತಿದೆ. ಸಾರ್ವಜನಿಕರಿಗೆ ಒಳ್ಳೆಯದಾಗಲೆಂದು ಈ ಧಾರ್ಮಿಕ ಕಾರ್ಯಕ್ರಮವನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಈ ಸುದ್ದಿಯನ್ನೂ ಓದಿ: ಮತದಾನಕ್ಕೂ ಮುನ್ನ ಆತ್ಮಹತ್ಯೆ ಮಾಡಿಕೊಂಡಿದ್ದ ಅಭ್ಯರ್ಥಿ ಗೆಲುವು..!
ಇನ್ನೂ ಗ್ರಾಮ ಸಮರದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ವಿಜಯ ಸಾಧಿಸಿರುವ ವಿಚಾರವಾಗಿ ಮಾತನಾಡಿ ಹರ್ಷ ವ್ಯಕ್ತಪಡಿಸಿದರು. ಬಿಜೆಪಿ ಅಧಿಕಾರದಲ್ಲಿದ್ದರೆ ಅಭಿವೃದ್ಧಿ ಸಾಧ್ಯ ಎಂದು ತಿಳಿಸಿದರು.