ವಿಜಯನಗರ: ವಿಶ್ವ ಪಾರಂಪರಿಕ ತಾಣ ಹಂಪಿಯ ಸ್ಮಾರಕಗಳ ವೀಕ್ಷಣೆಗೆ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಈಗ ಅಂಬಾರಿ ಬಸ್ಸನ್ನು ಪರಿಚಯಿಸುತ್ತಿದೆ. ಈ ಬಸ್ ಮೂಲಕ ತುಂಗಭದ್ರಾ ಜಲಾಶಯ, ಅಟಲ್ ಬಿಹಾರಿ ವಾಜಪೇಯಿ ಜೂಲಾಜಿಕಲ್ ಪಾರ್ಕ್ ಸೇರಿದಂತೆ ಹಂಪಿ ಸ್ಮಾರಕಗಳ ವೀಕ್ಷಣೆಗೆ ಯೋಜನೆ ರೂಪಿಸಲಾಗುತ್ತಿದೆ. ಹಂಪಿ ಅಭಿವೃದ್ಧಿ ಪ್ರಾಧಿಕಾರದ ಜತೆಗೂಡಿ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಈ ವ್ಯವಸ್ಥೆಯನ್ನು ಪ್ರವಾಸಿಗರಿಗೆ ಪರಿಚಯಿಸುತ್ತಿದೆ.
ಪ್ರಾಯೋಗಿಕವಾಗಿ ಇಂದು ಹಂಪಿಯಲ್ಲಿ ಬಸ್ ಸಂಚಾರ ನಡೆಸಲಾಯಿತು. ಸಂಚಾರದ ವೇಳೆ ವಿದ್ಯುತ್ ತಂತಿ ಹಾಗು ಮರಗಿಡಗಳು ಅಡ್ಡಿಯಾಗಲಿವೆಯೇ ಎಂಬುದನ್ನು ಪರೀಕ್ಷಿಸಲಾಯಿತು. ಈ ಸಂದರ್ಭದಲ್ಲಿ ಪ್ರಾಧಿಕಾರದ ಆಯುಕ್ತ ಸಿದ್ದರಾಮೇಶ್ವರ, ಆರ್.ಎಫ್.ಒ ವಿನಯ್, ಜೆಸ್ಕಾಂ ಅಧಿಕಾರಿ ಉಮೇಶ್, ಆರ್‌ಟಿಒ ಇನ್ಸ್‌ಪೆಕ್ಟರ್ ಸಂದೀಪ್ ಮತ್ತಿತರರು ಸಂಚರಿಸಿದರು.
ಇದನ್ನೂ ಓದಿ: ಈಸ್ ಆಫ್ ಡೂಯಿಂಗ್ ಬಿಸ್ನೆಸ್ ಶ್ರೇಯಾಂಕ ಪಟ್ಟಿಯಲ್ಲಿ ಕರ್ನಾಟಕ ಟಾಪ್