ಬಳ್ಳಾರಿ : ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಜಯಂತಿಯನ್ನು ನಗರದ ಮೊದಲ ರೈಲ್ವೆ ಗೇಟ್ ಬಳಿಯ ಅಂಬೇಡ್ಕರ್ ಭವನದ ಹತ್ತಿರದ ಅಂಬೇಡ್ಕರ್ ಪ್ರತಿಮೆಗೆ ಜಿಲ್ಲಾಧಿಕಾರಿ ನಕುಲ್ ಮಾಲಾರ್ಪಣೆ ಮಾಡುವುದರ ಮುಖಾಂತರ ಆಚರಿಸಿದರು.
ನಂತರ ಮಾತನಾಡಿದ ಅವರು, ಕೋವಿಡ್-19 ಹಿನ್ನೆಲೆ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಜಯಂತಿಯನ್ನು ಸರಳವಾಗಿ ಆಚರಿಸಲಾಗುತ್ತಿದೆ. ಈ ದೇಶಕ್ಕೆ ಅಂಬೇಡ್ಕರ್ ಅವರು ನೀಡಿದ ಕೊಡುಗೆ ಗಮನಾರ್ಹ. ಅವರ ವಿಚಾರಧಾರೆಗಳು ಸದಾ ಕಾಲಕ್ಕೂ ಪ್ರಸ್ತುತ. ಅವರ ವಿಚಾರ ಧಾರೆಗಳು ಮತ್ತು ಆದರ್ಶಗಳನ್ನು ಇಂದು ಎಲ್ಲರೂ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವುದರ ಮೂಲಕ ಪ್ರಚಾರಪಡಿಸುವ ಕೆಲಸ ಮಾಡಬೇಕು ಎಂದರು.
ಲಾಕ್ಡೌನ್ ಆದೇಶ ಇದ್ದರೂ ಕೂಡ ನೂರಾರು ಜನ ಸಾಮಾಜಿಕ ಅಂತರ ಕಾಯ್ದಕೊಳ್ಳದೆ ಗುಂಪು ಗುಂಪಾಗಿ ಸೇರಿ ಅಂಬೇಡ್ಕರ್ ಜಯಂತಿಯಲ್ಲಿ ಪಾಲ್ಗೊಂಡಿದ್ದರು.
ಕಾರ್ಯಕ್ರಮದಲ್ಲಿ ಶಾಸಕ ಸೋಮಶೇಖರ್ ರೆಡ್ಡಿ, ಜಿಪಂ ಸದಸ್ಯರುಗಳು ಸೇರಿ ವಿವಿಧ ಸಂಘಟನೆಗಳ ಮುಖಂಡರು ಇದ್ದರು.