ETV Bharat / state

ಹೊಸಪೇಟೆ ತಹಶೀಲ್ದಾರ್ ಕಚೇರಿಯಲ್ಲಿ ಅಗ್ನಿ ಅವಘಡ: ಕಡತಗಳು ಬೆಂಕಿಗಾಹುತಿ - accidental fire in Tahsildar's office

ಹೊಸಪೇಟೆ ತಹಶೀಲ್ದಾರ್ ಕಚೇರಿಯ ವಿದ್ಯುತ್ ವಾಹಕ ತಂತಿಗಳಲ್ಲಿ ಶಾರ್ಟ್ ಸರ್ಕ್ಯೂಟ್ ​​ ಸಂಭವಿಸಿ ಕಚೇರಿಯಲ್ಲಿ ಬೆಂಕಿ ಹೊತ್ತಿಕೊಂಡಿದೆ. ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಘಟನಾ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

An accidental fire in Tahsildar's office
ತಹಶೀಲ್ದಾರ್ ಕಚೇರಿಯಲ್ಲಿ ಕಾಣಿಸಿಕೊಂಡ ಆಕಸ್ಮಿಕ ಬೆಂಕಿ: ತಪ್ಪಿದ ಪ್ರಾಣಾಪಾಯ
author img

By

Published : May 2, 2020, 3:17 PM IST

ಬಳ್ಳಾರಿ: ಜಿಲ್ಲೆಯ ಹೊಸಪೇಟೆ ನಗರದ ತಹಶೀಲ್ದಾರ್ ಕಚೇರಿಯಲ್ಲಿಂದು ಆಕಸ್ಮಿಕವಾಗಿ ಅಗ್ನಿ ಅವಘಡ ಸಂಭವಿಸಿದ್ದು, ಯಾವುದೇ ಪ್ರಾಣಹಾನಿ ಆಗಿಲ್ಲ.

ತಹಶೀಲ್ದಾರ್ ಕಚೇರಿಯಲ್ಲಿ ಆಕಸ್ಮಿಕ ಬೆಂಕಿ: ತಪ್ಪಿದ ಅಪಾಯ

ಹೊಸಪೇಟೆ ತಹಶೀಲ್ದಾರ್ ಕಚೇರಿಯ ವಿದ್ಯುತ್ ವಾಹಕ ತಂತಿಗಳಲ್ಲಿ ಶಾರ್ಟ್ ಸರ್ಕ್ಯೂಟ್​​ನಿಂದ ಈ ಅವಘಡ ನಡೆದಿದ್ದು, ಕಚೇರಿಯೊಳಗಿದ್ದ ಕಂಪ್ಯೂಟರ್ ಹಾಗೂ ಕಡತಗಳು ಸುಟ್ಟು ಕರಕಲಾಗಿವೆ. ವಿಷಯ ತಿಳಿದ ಕ್ಷಣಾರ್ಧದಲ್ಲಿಯೇ ಅಗ್ನಿಶಾಮಕ ದಳದ ಸಿಬ್ಬಂದಿ ಘಟನಾ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್​​​ನಿಂದ ಬೆಂಕಿ ಹತ್ತಿರಬಹುದು ಎಂದು ಶಂಕಿಸಿ, ಸ್ಥಳಕ್ಕೆ ಎಸಿ ಶೇಖ್ ತನ್ವೀರ್ ಆಸೀಫ್ ಹಾಗೂ ತಹಶೀಲ್ದಾರ್ ಹೆಚ್.ವಿಶ್ವನಾಥ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.