ಹೊಸಪೇಟೆ (ಬಳ್ಳಾರಿ): ಕಾಮಗಾರಿಗಳ ಗುಣಮಟ್ಟವನ್ನು ಕಾಯ್ದುಕೊಳ್ಳುವುದರ ಜೊತೆಗೆ ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಅರಣ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಬಳ್ಳಾರಿ ರಸ್ತೆ ಹಾಗೂ ವೆಂಕಟಾಪುರ ಕ್ಯಾಂಪ್ ಪ್ರದೇಶಗಳ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿ ಗುಣಮಟ್ಟವನ್ನು ಕಾಪಾಡಲು ಹಾಗೂ ಕಾರ್ಯತೀವ್ರತೆ ಹೆಚ್ಚಿಸಲು ಕಾಮಗಾರಿಗಳ ಮೇಲ್ವಿಚಾರಣೆ ಮಾಡುತ್ತಿರುವ ಅಧಿಕಾರಿಗಳಿಗೆ ಹಾಗೂ ಇಂಜಿನಿಯರ್‌ಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಹೆಚ್.ವಿಶ್ವನಾಥ್, ನಗರಸಭೆ ಆಯುಕ್ತರಾದ ಜಯಲಕ್ಷ್ಮಿ, ಮನ್ಸೂರ್ ಸೇರಿದಂತೆ ಇತರ ಅಧಿಕಾರಿಗಳು ಇದ್ದರು.