ಹೊಸಪೇಟೆ : ಬಡವರಿಗಾಗಿ ಸರ್ಕಾರ ಅನ್ನಭಾಗ್ಯ ಯೋಜನೆಯಡಿ ನೀಡುವ ಪಡಿತರ ಅಕ್ಕಿಯನ್ನು ಜನರಿಂದ ಪಡೆದು, ಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಆಹಾರ ಇಲಾಖೆಯ ಅಧಿಕಾರಿಗಳು ಹಾಗೂ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ.
ನಗರದ ಮೀರಲಮ್ ಚಿತ್ರ ಮಂದಿರದ ಬಳಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಣಿಕೆ ಮಾಡುತ್ತಿದ್ದ ವೇಳೆ ದಾಳಿ ನಡೆಸಿ 50 ಕೆ.ಜಿ ತೂಕದ 30 ಚೀಲ ಅಕ್ಕಿ ವಶಪಡಿಸಿಕೊಳ್ಳಲಾಗಿದೆ. ದಂಧೆಕೋರರು ಜನರಿಂದ ಅಕ್ಕಿ ಪಡೆದು ಸಂತೆಯಲ್ಲಿ ಹೆಚ್ಚಿನ ಹಣಕ್ಕೆ ಮಾರಾಟ ಮಾಡಿ ಲಾಭ ಗಳಿಸುತ್ತಿದ್ದರು ಎಂದು ಆಹಾರ ಇಲಾಖೆ ಶಿರಸ್ತೆದಾರ ನಾಗರಾಜ್ ತಿಳಿಸಿದ್ದಾರೆ.
ಅಕ್ರಮದ ಬಗ್ಗೆ ಹೊಸಪೇಟೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.