ಬಳ್ಳಾರಿ : ನಿಗದಿತ 12 ಸಾವಿರ ರೂ. ವೇತನ ನೀತಿ ಜಾರಿಗೊಳಿಸಿ, ಕೊರೊನಾ ಸುರಕ್ಷತಾ ಸಾಮಗ್ರಿಗಳನ್ನು ಒದಗಿಸಬೇಕು ಎಂದು ಒತ್ತಾಯಿಸಿ ಐದನೇ ದಿನವೂ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ಮುಂದುವರೆಸಿದರು.
ನಗರದ ತಹಶೀಲ್ದಾರ್ ಕಚೇರಿ ಬಳಿಯ ವೃತ್ತದಲ್ಲಿ ಸೇರಿದ ಕಾರ್ಯಕರ್ತೆಯರು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಬಳ್ಳಾರಿ ತಾಲೂಕು, ಜಿಲ್ಲಾ ಕೇಂದ್ರಗಳಲ್ಲಿಯೂ ಮಾನವ ಸರಪಳಿ ನಿರ್ಮಿಸುವ ಮೂಲಕ ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಗೌರವ ಅಧ್ಯಕ್ಷೆ ಎ.ಶಾಂತ, ನಗರ ಘಟಕದ ಅಧ್ಯಕ್ಷೆ ರಾಮಕ್ಕ, ನಗರ ಘಟಕದ ಕಾರ್ಯದರ್ಶಿ ರೇಷ್ಮಾ ಹಾಗೂ ನೂರಾರು ಮಂದಿ ಭಾಗವಹಿಸಿದ್ದರು.