ಬಳ್ಳಾರಿ: ಮಾಸಿಕ ಕನಿಷ್ಠ 12,000 ರೂ. ವೇತನ ನೀಡಿ ಅಗತ್ಯ ಸುರಕ್ಷತಾ ಸಾಮಗ್ರಿ ಒದಗಿಸುವಂತೆ ಒತ್ತಾಯಿಸಿ ರಾಜ್ಯ ಆಶಾ ಕಾರ್ಯಕರ್ತೆಯರ ಸಂಘದ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟಿಸಿದರು.
ಈ ವೇಳೆ ಸಂಘದ ರಾಜ್ಯ ಕಾರ್ಯದರ್ಶಿ ಡಿ. ನಾಗಲಕ್ಷ್ಮಿ ಮಾತನಾಡಿ, ಕೊರೊನಾ ಸಮಯದಲ್ಲಿ ಆಶಾ ಕಾರ್ಯಕರ್ತೆಯರು ಸಾಕಷ್ಟು ಕೆಲಸ ಮಾಡುತ್ತಿದ್ದಾರೆ. ಹೀಗಾಗಿ, ಕಾರ್ಯಕರ್ತೆಯರಿಗೆ ಮಾಸಿಕ ಕನಿಷ್ಠ 12,000 ರೂ. ಗೌರವಧನ ನೀಡಬೇಕು. ಅಗತ್ಯವಿರುವಷ್ಟು ಸುರಕ್ಷತಾ ಸಾಮಗ್ರಿಗಳನ್ನು ಕಲ್ಪಿಸಿಕೊಡಬೇಕು ಎಂದು ಮನವಿ ಮಾಡಿದರು.
ಒಂದು ವೇಳೆ ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಜುಲೈ 10ರಂದು ಆರೋಗ್ಯ ಸೇವೆ ಸ್ಥಗಿತಗೊಳಿಸಿ ತೀವ್ರ ಹೋರಾಟ ಮಾಡುತ್ತವೆ ಎಂದರು.
ಬಳ್ಳಾರಿ ತಾಲೂಕಿನ ವಿವಿಧ ಪ್ರದೇಶದ ಆಶಾ ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.