ಹೊಸಪೇಟೆ: ತಾಲೂಕಿನ ಕಮಲಾಪುರದಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಝೂಲಾಜಿಕಲ್ ಪಾರ್ಕ್ನಲ್ಲಿ ಗಣರಾಜ್ಯೋತ್ಸವ ಪ್ರಯುಕ್ತ ಜನವರಿ 26 ರಂದು ಸಾರ್ವಜನಿಕರ ವೀಕ್ಷಣೆಗೆ ಅನುಕೂಲ ಮಾಡಲಾಗಿದೆ ಎಂದು ಪಾರ್ಕ್ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರತಿ ಮಂಗಳವಾರದಂದು ಸಾರ್ವಜನಿಕರ ವೀಕ್ಷಣೆಗೆ ಅವಕಾಶವಿಲ್ಲ. ಆದರೆ ಜನವರಿ 26 ಮಂಗಳವಾರ ಬಂದಿದ್ದರೂ ಗಣರಾಜ್ಯೋತ್ಸವದ ಪ್ರಯುಕ್ತ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬರುವ ನೀರಿಕ್ಷೆ ಇದೆ. ಈ ಹಿನ್ನೆಲೆ ಸಾರ್ವಜನಿಕರಿಗೆ ಅಂದು ಅವಕಾಶ ಕಲ್ಪಿಸಲಾಗಿದೆ.
ಝೂಲಾಜಿಕಲ್ ಪಾರ್ಕ್ನ ಸಫಾರಿ ಮತ್ತು ಮೃಗಾಲಯವನ್ನು ಅಂದು ಸಾರ್ವಜನಿಕರ ವೀಕ್ಷಣೆಗೆ ತೆರೆಯಲಾಗುತ್ತದೆ. ಹೆಚ್ಚಿನ ಮಾಹಿತಿಗೆ ದೂ.ಸಂಖ್ಯೆ:08394-29289 ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ: ಸಿಎಂ ಸಲಹೆಗಾರ ಹುದ್ದೆಗಳ ನೇಮಕ ಪ್ರಶ್ನಿಸಿ ಅರ್ಜಿ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್