ಬಳ್ಳಾರಿ: ಜಿಲ್ಲೆಯ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಸರ್ಕಾರಿ ಬಾಲಕರ ಮತ್ತು ಬಾಲಕಿಯರ ಬಾಲಮಂದಿರಗಳಲ್ಲಿ ನೊವೇಲ್ ಕೊರೊನಾ ವೈರಸ್ ಕುರಿತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಆರ್.ಬಿ.ಎಸ್.ಕೆ ವೈದ್ಯಾಧಿಕಾರಿಗಳಾದ ಡಾ.ಜ್ಯೋತಿ ಮಾತನಾಡಿ, ಕೋರೊನಾ ವೈರಸ್ ಮಾರಣಾಂತಿಕ ರೋಗವಾಗಿದೆ. ರೋಗ ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು.ಒಬ್ಬರಿಂದ ಮತ್ತೊಬ್ಬರಿಗೆ ಹರಡದ ರೀತಿ ಮುಂಜಾಗೃತಾ ಕ್ರಮಗಳನ್ನು ಅನುಸರಿಸಬೇಕು.
ವಿಶೇಷವಾಗಿ ಸಾಬೂನುನಿಂದ ಕೈ ತೊಳೆದುಕೊಳ್ಳುವುದು, ಕೆಮ್ಮುವಾಗ ಮತ್ತು ಸೀನುವಾಗ ಮಾಸ್ಕ್ ಹಾಗೂ ಕರವಸ್ರ್ತಗಳನ್ನು ಉಪಯೋಗಿಸುವುದು. ಸಾರ್ವಜನಿಕ ಸ್ಥಳಗಳಲ್ಲಿ ಉಗಳಬಾರದು. ಉಸಿರಾಟದ ತೊಂದರೆಯಾದಲ್ಲಿ ತಕ್ಷಣ ವೈದ್ಯರನ್ನು ಸಂರ್ಪಕಿಸಬೇಕು ಎಂದು ಮಾಹಿತಿ ನೀಡಿದರು.