ಬಳ್ಳಾರಿ: ಜನಾರ್ದನ ರೆಡ್ಡಿಗೆ ಬಳ್ಳಾರಿಗೆ ಬರಲು ಸುಪ್ರೀಂಕೋರ್ಟ್ ಅನುಮತಿ ನೀಡಿರುವುದು ಸ್ವಾಗತಾರ್ಹ ಎಂದು ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ. ನಗರದ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಬಹಳ ದಿನಗಳ ನಂತರ ಅವರು ಬರುತ್ತಿದ್ದಾರೆ. ಬೇರೆ ವಿಚಾರಗಳನ್ನು ನಾನು ಮಾತನಾಡುವುದಿಲ್ಲ ಎಂದರು.
ರಾಜಕೀಯ ಬೆಳವಣಿಗೆ ಕುರಿತು ಮಾತನಾಡುವುದಿಲ್ಲ. ಅದನ್ನು ಪಕ್ಷ ತೀರ್ಮಾನ ಮಾಡಬೇಕಾಗುತ್ತದೆ. ರಾಜಕೀಯವನ್ನು ಜನಾರ್ದನ ರೆಡ್ಡಿ ಅವರಿಂದ ತಿಳಿದುಕೊಳ್ಳಬೇಕಾಗುತ್ತದೆ ಎಂದು ಹೇಳಿದರು.
ಕೋರ್ಟ್ ಎಷ್ಟು ದಿನಗಳ ಕಾಲಾವಕಾಶ ನೀಡಿದೆ ಎಂಬ ಕುರಿತು ಮಾಹಿತಿ ಇಲ್ಲ. ಹಾಗಾಗಿ ಅದರ ಬಗ್ಗೆ ಮಾತನಾಡುವುದಿಲ್ಲ. ಬಳ್ಳಾರಿಗೆ ಬರಲು ಅವಕಾಶ ನೀಡಿರುವುದು ಕಾನೂನಾತ್ಮಕ ಪ್ರಕ್ರಿಯೆಗಳು. ಕೋರ್ಟ್ ಯಾವ ತೀರ್ಮಾನ ತೆಗೆದುಕೊಳ್ಳುತ್ತದೆಯೋ ಅದು ಒಳ್ಳೆಯ ನಿರ್ಣಯವಾಗಿರುತ್ತದೆ ಎಂದರು.
ಇದನ್ನೂ ಓದಿ: ಜಾಮೀನು ಸಿಕ್ಕರೂ ಜೈಲಲ್ಲೇ ರಾತ್ರಿ ಕಳೆದ ವಿನಯ್ ಕುಲಕರ್ಣಿ ಇಂದು ಬಿಡುಗಡೆ