ಬಳ್ಳಾರಿ: ಜೆಎನ್ಯು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಹಾಗೂ ಅಧ್ಯಾಪಕರ ಮೇಲಿನ ಹಲ್ಲೆಯನ್ನು ಖಂಡಿಸಿ, ಬಳ್ಳಾರಿಯ ಗಡಿಗಿ ಚನ್ನಪ್ಪ ವೃತ್ತದಲ್ಲಿ ಎಐಡಿಎಸ್ಒ ಜಿಲ್ಲಾ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು.
ನಿನ್ನೆ ತಡರಾತ್ರಿ ಜೆಎನ್ಯು ವಿಶ್ವವಿದ್ಯಾಲಯದಲ್ಲಿ ವಿದ್ಯುತ್ ಸಂಪರ್ಕ ತೆಗೆದ ಕೆಲ ಗೂಂಡಾಗಳು ಮಾರಕಾಸ್ತ್ರಗಳಿಂದ ವಿದ್ಯಾರ್ಥಿನಿಯರ ಹಾಸ್ಟೆಲ್ಗೆ ನುಗ್ಗಿ ದಾಳಿ ಮಾಡಿದ್ದಾರೆ. ಅಲ್ಲದೇ ಪ್ರೊ.ಸುಚಿತ್ರ ಅವರ ತೆಲೆಹೊಡೆದಿದ್ದಾರೆ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.
ವಿ.ವಿ ಶುಲ್ಕ ಹೆಚ್ಚಳದ ವಿರುದ್ದ ಪ್ರತಿಭಟಿಸುತ್ತಿದ್ದ ಜೆಎನ್ಯು ವಿದ್ಯಾರ್ಥಿ ಸಂಘದ ನಾಯಕರನ್ನು ಗುರಿಯಾಗಿಸಿಕೊಂಡು ಈ ದಾಳಿ ಮಾಡಿದ್ದಾರೆ ಎಂದು ಸಿಟ್ಟು ವ್ಯಕ್ತಪಡಿಸಿದರು.