ಬಳ್ಳಾರಿ: ಮಹಾನಗರ ಪಾಲಿಕೆ ಕಚೇರಿಯಲ್ಲಿ ಅರ್ಜಿ ನಮೂನೆ-2 ರ ಕ್ಯಾತೆ ಮತ್ತೆ ಶುರುವಾಗಿದೆ. ಇಂದು ಮಹಾನಗರ ಪಾಲಿಕೆ ಆಯುಕ್ತರ ಕಚೇರಿಗೆ ಸಾರ್ವಜನಿಕರು ಮುತ್ತಿಗೆ ಹಾಕುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ.
ಕಳೆದೊಂದು ವರ್ಷದಿಂದ ಅರ್ಜಿ ನಮೂನೆ-2 ಅನ್ನು ನೀಡದೆ ಸತಾಯಿಸುತ್ತಿರುವ ಪಾಲಿಕೆ ಸಿಬ್ಬಂದಿ ವಿರುದ್ಧ ಸಾರ್ವಜನಿಕರು ಸಿಡಿದೆದ್ದಿದ್ದಾರೆ. ಪಾಲಿಕೆ ಆಯುಕ್ತೆ ಪ್ರೀತಿ ಗೆಹ್ಲೋಟ್ ಕಚೇರಿಗೆ ನುಗ್ಗಿ ದಾಂಧಲೆ ಮಾಡಿದ್ದಾರೆ.
ಯಾರು ಲಂಚ ನೀಡುತ್ತಾರೋ ಅವರಿಗೆ ಮಾತ್ರ ಫಾರ್ಮ್ ನಂ- 2 ನೀಡುತ್ತಾರೆ. ಪಾಲಿಕೆ ಆಯುಕ್ತರ ಗಮನಕ್ಕೆ ತಂದರೂ ನಮ್ಮ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂದು ಜನತೆ ಆರೋಪಿಸಿದ್ದಾರೆ.
ಈ ಹಿಂದೆ ಇದ್ದ ಆಯುಕ್ತೆ ತುಷಾರಮಣಿ ಭ್ರಷ್ಟಾಚಾರ ಆರೋಪದಡಿ ಅಮಾನತುಗೊಂಡಿದ್ದರು. ಅವರ ನಂತರ ಬಂದ ಪ್ರೀತಿ ಗೆಹ್ಲೋಟ್ ಕಾಲಾವಾಧಿಯಲ್ಲಿಯೂ ಭ್ರಷ್ಟಾಚಾರ ವ್ಯಾಪಕವಾಗಿದೆ ಎಂಬ ಆರೋಪ ಕೇಳಿ ಬಂದಿದೆ.