ಬಳ್ಳಾರಿ: ಕೊರೊನಾ ವೈರಸ್ ಹರಡುವ ಭೀತಿಯಿಂದ ಗಣಿನಗರಿ ಬಳ್ಳಾರಿಯಲ್ಲಿ ಮುಂಜಾಗೃತಾ ಕ್ರಮ ಕೈಗೊಳ್ಳಲಾಗಿದ್ದು, ರಾಜ್ಯ ಸರ್ಕಾರದ ಸೂಚನೆ ಮೇರೆಗೆ ಎಲ್ಇಡಿ ಪರದೆಯುಳ್ಳ ವಾಹನದ ಮೂಲಕ ನಗರದಲ್ಲಿ ಜನಜಾಗೃತಿ ಕಾರ್ಯಕ್ರಮ ನಡೆಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜನಜಾಗತಿ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಈವರೆಗೂ ಕೊರೊನಾ ವೈರಸ್ ಪ್ರಕರಣಗಳು ಜಿಲ್ಲೆಯಲ್ಲಿ ಪತ್ತೆಯಾಗಿಲ್ಲ. ಈಗಾಗಲೇ ಹಂಪಿ, ಜಿಂದಾಲ್ನಂತಹ ಪ್ರಮುಖ ಸ್ಥಳಗಳಲ್ಲಿ ನಿಗಾ ವಹಿಸಲಾಗಿದೆ. ಯಾರೂ ಆತಂಕಕ್ಕೊಳಗಾಗುವುದು ಬೇಡ ಎಂದರು.
ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿರುವ ಸ್ಪಂದನಾ ಕೇಂದ್ರದಲ್ಲಿ ಕೊರೊನಾ ವೈರಸ್ ತಡೆಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ವೈರಸ್ ಪತ್ತೆಯಾದ ಪ್ರಕರಣಗಳು ತಿಳಿದರೆ ಕೂಡಲೇ ಸಾರ್ವಜನಿಕರು ಈ ಕೆಳಗಿನ ದೂರವಾಣಿ ಸಂಖೆಗೆ ಕರೆ ಮಾಡಿ ಎಂದು ತಿಳಿಸಿದ್ದಾರೆ.
8277888866/ 08392- 277100,
TOLL FREE NUMBER 1077