ETV Bharat / state

ಗಣಿನಾಡಿನಲ್ಲಿ 2ನೇ ಹಂತದ ಗ್ರಾ.ಪಂ ಚುನಾವಣೆಗೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ - Ballari second step election

ಬಳ್ಳಾರಿ ಜಿಲ್ಲೆಯ ಆರು ತಾಲೂಕುಗಳಾದ ಸಂಡೂರು, ಹಗರಿಬೊಮ್ಮನಹಳ್ಳಿ, ಹೂವಿನಹಡಗಲಿ, ಕೂಡ್ಲಿಗಿ, ಕೊಟ್ಟೂರು, ಹರಪನಹಳ್ಳಿಯ ಅಂದಾಜು 144 ಗ್ರಾಮ‌ ಪಂಚಾಯಿತಿಗಳಲ್ಲಿ ಸ್ಥಾಪಿಸಲಾದ ಸುಮಾರು 1,149 ಮತಗಟ್ಟೆಗಳಲ್ಲಿ ನಾಳೆ ಬೆಳಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ.

ಗ್ರಾ.ಪಂ ಚುನಾವಣೆ
ಗ್ರಾ.ಪಂ ಚುನಾವಣೆ
author img

By

Published : Dec 26, 2020, 7:11 PM IST

ಬಳ್ಳಾರಿ: ಜಿಲ್ಲೆಯಲ್ಲಿ ನಾಳೆ ನಡೆಯಲಿರುವ ಎರಡನೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆಗೆ ಜಿಲ್ಲಾಡಳಿತ ಸಕಲ ಸಿದ್ದತೆ ಮಾಡಿಕೊಂಡಿದೆ.

ಜಿಲ್ಲೆಯ ಆರು ತಾಲೂಕುಗಳಾದ ಸಂಡೂರು, ಹಗರಿಬೊಮ್ಮನಹಳ್ಳಿ, ಹೂವಿನಹಡಗಲಿ, ಕೂಡ್ಲಿಗಿ, ಕೊಟ್ಟೂರು, ಹರಪನಹಳ್ಳಿಯ ಅಂದಾಜು 144 ಗ್ರಾಮ‌ ಪಂಚಾಯಿತಿಗಳಲ್ಲಿ ಸ್ಥಾಪಿಸಲಾದ ಸುಮಾರು 1,149 ಮತಗಟ್ಟೆಗಳಲ್ಲಿ ನಾಳೆ ಬೆಳಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ.

ಮತಪೆಟ್ಟಿಗೆಗಳನ್ನು‌ ಮಸ್ಟರಿಂಗ್ ಹಾಗೂ ಡಿಮಸ್ಟರಿಂಗ್ ಮಾಡೋ ಕಾರ್ಯವು ಜಿಲ್ಲೆಯ ಹೂವಿನಹಡಗಲಿ ತಾಲೂಕಿನಲ್ಲಿ ಜೋರಾಗಿ ನಡೆಯಿತು. ಒಟ್ಟಾರೆ 1,248 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಆ ಪೈಕಿ 99 ಮತಗಟ್ಟೆಗಳಲ್ಲಿ ಅವಿರೋಧ ಆಯ್ಕೆ ಹಾಗೂ ಮತದಾನ ಬಹಿಷ್ಕರಿಸಿದ ಹಿನ್ನೆಲೆ ಮತದಾನವನ್ನು ಸ್ಥಗಿತಗೊಳಿಸಲಾಗಿದೆ. ಇದೀಗ ಕೇವಲ 1,149 ಮತಗಟ್ಟೆಗಳಲ್ಲಿ ಮಾತ್ರ ಮತದಾನ ಪ್ರಕ್ರಿಯೆ ನಡೆಯಲಿದೆ.

144 ಗ್ರಾಮ ಪಂಚಾಯಿತಿಗಳ ಅಂದಾಜು 2,243 ಸ್ಥಾನಗಳಿಗೆ ಸುಮಾರು 5,457 ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಈವರೆಗೂ 320 ಮಂದಿ ಅವಿರೋಧ ಆಯ್ಕೆಯಾಗಿದ್ದಾರೆಂದು ಜಿಲ್ಲಾ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ‌.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.