ETV Bharat / state

ಕೋವಿಡ್​ನಿಂದ ಮೃತಪಟ್ಟ ಪೊಲೀಸ್ ಸಿಬ್ಬಂದಿಗೆ ಎಸ್​ಪಿ ಸೈದುಲು ಅಡಾವತ್ ಶ್ರದ್ಧಾಂಜಲಿ..! - bellary news

ಜಿಲ್ಲೆಯ ನಾನಾ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಏಳು ಮಂದಿ ಪೊಲೀಸ್ ಸಿಬ್ಬಂದಿ ಮಹಾಮಾರಿ ಕೋವಿಡ್​ಗೆ ಬಲಿಯಾಗಿದ್ದಾರೆ. ಅವರ ಆತ್ಮಕ್ಕೆ ಆ ಭಗವಂತ ಶಾಂತಿ ನೀಡಲಿ ಎಂದು‌ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು. ಮೃತ ಪೊಲೀಸ್ ಸಿಬ್ಬಂದಿಯ ಅವಲಂಬಿತ ಕುಟುಂಬಸ್ಥರಿಗೆ ಆತ್ಮಸ್ಥೈರ್ಯ ತುಂಬುವಂತಹ ಕಾರ್ಯವನ್ನು ಮುಂದಿನ ದಿನಗಳಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯು ಮಾಡಲಿದೆ ಎಂದು ಭರವಸೆ ನೀಡಿದರು.

ಎಸ್​ಪಿ ಸೈದುಲು ಅಡಾವತ್
ಎಸ್​ಪಿ ಸೈದುಲು ಅಡಾವತ್
author img

By

Published : Sep 21, 2020, 8:22 PM IST

ಬಳ್ಳಾರಿ: ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಈವರೆಗೂ ಏಳು ಮಂದಿ ಕೋವಿಡ್​ನಿಂದ ಮೃತಪಟ್ಟಿದ್ದು, ಇವರಲ್ಲಿ 40 ವರ್ಷ ವಯೋಮಾನದ ಐವರು ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್ ಬೇಸರ ವ್ಯಕ್ತಪಡಿಸಿದರು.

ಜಿಲ್ಲಾ ಪೊಲೀಸ್ ಇಲಾಖೆ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ನಾನಾ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಏಳು ಮಂದಿ ಪೊಲೀಸ್ ಸಿಬ್ಬಂದಿ ಮಹಾಮಾರಿ ಕೋವಿಡ್​ಗೆ ಬಲಿಯಾಗಿದ್ದಾರೆ. ಅವರ ಆತ್ಮಕ್ಕೆ ಆ ಭಗವಂತ ಶಾಂತಿ ನೀಡಲಿ ಎಂದು‌ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು. ಮೃತ ಪೊಲೀಸ್ ಸಿಬ್ಬಂದಿಯ ಅವಲಂಬಿತ ಕುಟುಂಬಸ್ಥರಿಗೆ ಆತ್ಮಸ್ಥೈರ್ಯ ತುಂಬುವಂತಹ ಕಾರ್ಯವನ್ನು ಮುಂದಿನ ದಿನಗಳಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯು ಮಾಡಲಿದೆ ಎಂದು ಭರವಸೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್​ಪಿ ಸೈದುಲು ಅಡಾವತ್

ಮಹಿಳಾ ದೌರ್ಜನ್ಯ ಪ್ರಕರಣಗಳ ಹೆಚ್ಚಳ: ಕಳೆದ ಮುರ್ನಾಲ್ಕು ವರ್ಷಗಳಗೆ ಹೋಲಿಕೆ ಮಾಡಿದರೆ ಗಣಿ ಜಿಲ್ಲೆಯ ಮಹಿಳೆಯರ ಹಾಗೂ ಅಪ್ರಾಪ್ತ ಬಾಲಕಿಯರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿವೆ.‌ ಈವರೆಗೂ ಕೂಡ ವರ್ಷದಲ್ಲಿ ಸರಾಸರಿ 1,100 ಪ್ರಕರಣಗಳು ದಾಖಲಾಗಿವೆ ಎಂದರು.

ಗ್ರಾಮೀಣ ಭಾಗದಲ್ಲಿ ಮಹಿಳೆಯರ ಹಾಗೂ ಅಪ್ರಾಪ್ತ ಬಾಲಕಿಯರ ‌ಮೇಲಿನ‌ ದೌರ್ಜನ್ಯ ಪ್ರಕರಣಗಳನ್ನು ಪತ್ತೆ ಹಚ್ಚಬೇಕಿದೆ.‌ ಈ ನಿಟ್ಟಿನಲ್ಲಿ ಪ್ರತಿಯೊಂದು ಗ್ರಾಮದಲ್ಲೂ ಕೂಡ ಪೊಲೀಸ್ ಬೀಟ್ ಹಾಕಲಾಗುತ್ತದೆ. ದುರ್ಗಾ ಪಡೆಯೊಂದಿಗೆ ಕೈಜೋಡಿಸುವ ನೈಪುಣ್ಯವುಳ್ಳ ಮಹಿಳೆಯರನ್ನು ತೊಡಗಿಸಿಕೊಂಡು ಮಹಿಳಾ ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟಲು ಶ್ರಮಿಸಲಾಗುವುದು ಎಂದು ಎಸ್​​ಪಿ ಸೈದುಲು ಅಡಾವತ್ ಹೆಳಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.