ಬಳ್ಳಾರಿ: ಗಣಿನಾಡು ಬಳ್ಳಾರಿಯಲ್ಲಿ ಕೆಎಸ್ಆರ್ಟಿಸಿ ಬಸ್ ಸಂಚಾರ ಆರಂಭವಾಗಿದೆ. ಆದರೆ ಪ್ರಯಾಣಿಕರ ಸಂಖ್ಯೆ ಕಡಿಮೆಯಿದೆ ಎಂದು ಕೆಎಸ್ಆರ್ಟಿಸಿ ಬಳ್ಳಾರಿ ವಿಭಾಗದ ವ್ಯವಸ್ಥಾಪಕ ಶಿವಪ್ರಕಾಶ ತಿಳಿಸಿದ್ದಾರೆ. ಈಟಿವಿ ಭಾರತದೊಂದಿಗೆ ಮಾತನಾಡಿದ ಅವರು, ಬಳ್ಳಾರಿ ಕೇಂದ್ರ ನಿಲ್ದಾಣದಿಂದ ಪ್ರಯಾಣ ಮಾಡುವವರ ಸಂಖ್ಯೆ ಬಹಳ ಕಡಿಮೆಯಿದೆ. ಬೆಂಗಳೂರು ಹಾಗೂ ಸಿರುಗುಪ್ಪಗೆ ತಲಾ 4 ಬಸ್ ಮತ್ತು ಹೊಸಪೇಟೆಗೆ 2 ಬಸ್ಗಳನ್ನು ಕಳಿಸಿದ್ದೇವೆ ಎಂದು ತಿಳಿಸಿದರು.
ಪ್ರಯಾಣಿಕರು ಬಂದಂತೆ ಅವರಿಗೆ ಊರುಗಳಿಗೆ ಹೋಗಲು ಅನುಕೂಲ ಮಾಡಿಕೊಡುತ್ತೇವೆ. ಆದರೆ ಕನಿಷ್ಠ 30 ಪ್ರಯಾಣಿಕರು ಇರಬೇಕು. ಪಾಯಿಂಟ್ಯಿಂದ ಪಾಯಿಂಟ್ಗೆ (ಉದಾ: ಬಳ್ಳಾರಿಯಿಂದ ಬೆಂಗಳೂರಿಗೆ ) ಪ್ರಯಾಣ ಮಾಡುವ ವ್ಯವಸ್ಥೆ ಮಾಡಿದ್ದೇವೆ ಎಂದರು.
ಬಸ್ ಸಂಚಾರ ಬೆಳಿಗ್ಗೆ 7ರಿಂದ ಆರಂಭವಾಗಿ ಸಂಜೆ 7 ಗಂಟೆಯವರೆಗೆ ಇರುತ್ತದೆ. 10 ವರ್ಷದೊಳಗಿನ ಮಕ್ಕಳು ಮತ್ತು 60 ವರ್ಷ ಮೆಲ್ಪಟ್ಟ ಹಿರಿಯ ನಾಗರಿಕರಿಗೆ ಬಸ್ ಸಂಚಾರಕ್ಕೆ ಅವಕಾಶವಿಲ್ಲ ಎಂದು ತಿಳಿಸಿದರು. ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್ ಹಾಗೂ ಸ್ಯಾನಿಟೈಸರ್ ಉಪಯೋಗಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕೆಂದು ತಿಳಿಸಿದರು.