ಬಳ್ಳಾರಿ: ಜಿಲ್ಲೆ ಕೊರೊನಾ ಮುಕ್ತವಾಗಲಿದ್ದು, ಶೀಘ್ರವೇ ಸಿಹಿ ಸುದ್ದಿ ಸಿಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಗರದ ಡಿಸಿ ಕಚೇರಿಯ ಸಭಾಂಗಣದಲ್ಲಿಂದು ನಡೆದ ಕೋವಿಡ್ -19ಗೆ ಸಂಬಂಧಿಸಿದ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಗಣಿ ಜಿಲ್ಲೆ ಕೊರೊನಾ ವೈರಸ್ನಿಂದ ಮುಕ್ತಿ ಪಡೆಯಲಿದೆ ಎಂದರು. ಕೊರೊನಾ ಜೊತೆಗೆ ರೈತರ ಸಮಸ್ಯೆ, ತೋಟಗಾರಿಕೆಯ ಸಮಸ್ಯೆ ಕುರಿತು ಚರ್ಚಿಸಲಾಗಿದ್ದು, ಎಲ್ಲಾ ಮುಂಜಾಗ್ರತಾ ಕ್ರಮ ಕೈಗೊಳ್ಳಲಿದ್ದೇವೆ ಎಂದರು.
ಲಾಕ್ಡೌನ್ ಸಡಿಲಿಕೆ ವಿಚಾರವನ್ನ ನಾನು ಬಹಿರಂಗವಾಗಿ ಹೇಳಲ್ಲ ಎಂದರು. ಈ ವೇಳೆ ಕೊಪ್ಪಳ ಕರಡಿ ಸಂಗಣ್ಣ, ಬಳ್ಳಾರಿ ಸಂಸದ ವೈ. ದೇವೇಂದ್ರಪ್ಪ, ಜಿಲ್ಲಾಧಿಕಾರಿ ಎಸ್.ಎಸ್. ನಕುಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ. ಬಾಬಾ, ಬಳ್ಳಾರಿನಗರ ಶಾಸಕ ಗಾಲಿ ಸೋಮಶೇಖರರೆಡ್ಡಿ ಉಪಸ್ಥಿತರಿದ್ದರು.